ಸಿದ್ದರಾವಣ ಹೇಳಿಕೆಗೆ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್ ದೂರು
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಮತ್ತು ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಮತ್ತು ನಿಂದನಕಾರಿ ಪ್ರಚಾರ ಮಾಡುವುದಕ್ಕೆ ರಾಜ್ಯ ಕಾಂಗ್ರೆಸ್ ಅಕ್ರಮ ಗಣಿಗಾರಿಕೆ ಆರೋಪಿ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ದೂರು ದಾಖಲಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿದ್ದರಾವಣ ಎಂದು ಕರೆದು ಜನಾರ್ದನ ರೆಡ್ಡಿ ಅವಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಸಿದ್ದರಾಮಯ್ಯನವರನ್ನು ರಾವಣನಿಗೆ ಹೋಲಿಸುವ ಮೂಲಕ ಜನಾರ್ದನ ರೆಡ್ಡಿ ವರ್ಗಗಳ ನಡುವೆ ಜನ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125ರಡಿ ದ್ವೇಷವನ್ನು ಹುಟ್ಟುಹಾಕುವುದಕ್ಕೆ ಪ್ರಚೋದನೆ ನೀಡುತ್ತಿದ್ದಾರೆ. ಇದು ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರದ ಮತದಾರರನ್ನು ಸೆಳೆಯುವ ಪ್ರಯತ್ನವಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಕಾಂಗ್ರೆಸ್ ದೂರಿನಲ್ಲಿ ಆರೋಪಿಸಿದೆ.
ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ನೇತೃತ್ವದ ಕಾಂಗ್ರೆಸ್ ನಿಯೋಗ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಜನಾರ್ದನ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಶ್ರೀರಾಮುಲು ಪರ ಪ್ರಚಾರ ನಡೆಸಿದ್ದ ಜನಾರ್ದನ ರೆಡ್ಡಿ, ಬಿಜೆಪಿಯಿಂದ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಶ್ರೀರಾಮುಲು, ದೇವರು ರಾಕ್ಷಸರನ್ನು ಸಂಹಾರ ಮಾಡಿದಂತೆ ಬಿಜೆಪಿ ಸಿದ್ದರಾವಣನನ್ನು ನಾಶಮಾಡಲಿದ್ದಾರೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


