ನಾಗರಿಕ ಸಂಸ್ಥೆಗಳ ಸಮನ್ವಯತೆಗೆ ಪ್ರಾಧಿಕಾರ ರಚನೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ
ಉತ್ತಮ ಸಮನ್ವಯತೆ ಮತ್ತು ಬೆಂಗಳೂರಿಗೆ ಸಂಬಂಧಪಟ್ಟ ಅಭಿವೃದ್ಧಿಪರ ಕೆಲಸಗಳನ್ನು ಜಾರಿಗೆ ...

ಬೆಂಗಳೂರು: ಉತ್ತಮ ಸಮನ್ವಯತೆ ಮತ್ತು ಬೆಂಗಳೂರಿಗೆ ಸಂಬಂಧಪಟ್ಟ ಅಭಿವೃದ್ಧಿಪರ ಕೆಲಸಗಳನ್ನು ಜಾರಿಗೆ ತರಲು ಒಂದೇ ಸೂರಿನಡಿ ಹಲವು ನಾಗರಿಕ ಸಂಸ್ಥೆಗಳನ್ನು ತರಲು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸಾರ್ವಜನಿಕ ತನಿಖಾ ಪ್ರಾಧಿಕಾರವನ್ನು ತರಲು ಭರವಸೆ ನೀಡಿದ್ದು ಅದು ಈ ಸಂಸ್ಥೆಗಳ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿರುತ್ತದೆ.
ಈ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಸಣ್ಣ ನಿಗಮಗಳಾಗಿ ವಿಂಗಡಿಸುವುದರಲ್ಲಿ ಆಸಕ್ತಿ ಹೊಂದಿದ್ದು ಅವುಗಳನ್ನು ಇತರ ನಾಗರಿಕ ಸಂಸ್ಥೆಗಳ ಜೊತೆ ಬೃಹತ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ತರಲು ಒಲವು ತೋರಿರುವುದು ಕಂಡುಬರುತ್ತದೆ.
ಬೆಂಗಳೂರಿನಲ್ಲಿ ಬಿಬಿಎಂಪಿ, ಬಿಡಿಎ, ಬೆಸ್ಕಾಂ, ಬಿಎಂಟಿಸಿ, ಬಿಡಬ್ಲ್ಯುಎಸ್ಎಸ್ ಬಿ ಮತ್ತು ಇತರ ಕೆಲವು ನಾಗರಿಕ ಸಂಸ್ಥೆಗಳಿವೆ. ಈ ಎಲ್ಲಾ ಸಂಸ್ಥೆಗಳು ಬೆಂಗಳೂರು ನಗರಕ್ಕೆ ಕೆಲಸ ಮಾಡುವುದಿದ್ದರೂ ಈ ಸಂಸ್ಥೆಗಳ ಮಧ್ಯೆ ಸಮನ್ವಯದ ಕೊರತೆಯಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಅದು ಬೆಸ್ಕಾಂ ಮತ್ತು ಬಿಡಬ್ಲ್ಯುಎಸ್ಎಸ್ ಬಿಯಿಂದ ರಸ್ತೆ ಅಗೆಯುವ ಕೆಲಸ ಮಾಡುವುದಿರಲಿ, ಪಾದಚಾರಿ ಮಾರ್ಗವನ್ನು ಅತಿಕ್ರಮಿಸುವುದಾಗಲಿ ಅಥವಾ ಗಿಡ, ಮರಗಳನ್ನು ಕಡಿಯುವುದಾಗಲಿ ಬಿಬಿಎಂಪಿಗೆ ತಿಳಿಸದೆ ಮಾಡುತ್ತವೆ. ಈ ಸಂಸ್ಥೆಗಳಲ್ಲಿ ಹಿರಿಯ ಐಎಎಸ್ ಅಧಿಕಾರಿಗಳಿದ್ದರೂ ಕೂಡ ಅಲ್ಲಿ ಸಮನ್ವಯದ ಕೊರತೆ ಎದ್ದು ಕಾಣುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


