ರಾಜಕೀಯ

ಸ್ನೇಹಿತ ಶ್ರೀರಾಮುಲುಗಾಗಿ ರೆಡ್ಡಿ ಪ್ರಚಾರ ಮಾಡುತ್ತಿದ್ದಾರೆ, ಬಿಜೆಪಿಗಾಗಿ ಅಲ್ಲ: ಬಿಎಸ್ ಯಡಿಯೂರಪ್ಪ

ಜನರ್ಧನ ರೆಡ್ಡಿ ಸ್ನೇಹಿತ ಶ್ರೀ ರಾಮುಲು ಪರವಾಗಿ ಪ್ರಚಾರ ಮಾಡುತ್ತಿದ್ದಾರೆಯೇ ವಿನಃ ಬಿಜೆಪಿ ಪರವಾಗಿ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ...

ಸ್ನೇಹಿತ ಶ್ರೀರಾಮುಲುಗಾಗಿ ರೆಡ್ಡಿ  ಪ್ರಚಾರ ಮಾಡುತ್ತಿದ್ದಾರೆ, ಬಿಜೆಪಿಗಾಗಿ ಅಲ್ಲ: ಬಿಎಸ್ ಯಡಿಯೂರಪ್ಪ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
Published On :
ಕಲಬುರಗಿ: ಜನರ್ಧನ ರೆಡ್ಡಿ ಸ್ನೇಹಿತ ಶ್ರೀ ರಾಮುಲು ಪರವಾಗಿ ಪ್ರಚಾರ ಮಾಡುತ್ತಿದ್ದಾರೆಯೇ ವಿನಃ ಬಿಜೆಪಿ ಪರವಾಗಿ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ. 
ಈ ಕುರಿತಂತೆ ಕಲಬುರಗಿಯಲ್ಲಿ ಸ್ಪಷ್ಟನೆ ನೀಡಿರುವ ಅವರು, ರೆಡ್ಡಿಯವರು ತಮ್ಮ ಗೆಳೆಯ ಶ್ರೀ ರಾಮುಲು ಪರವಾಗಿ ಪ್ರಚಾರ ಮಾಡುತ್ತಿದ್ದಾರೆಯೇ ಹೊರತು ಬಿಜೆಪಿ ಪಕ್ಷದ ಪರವಾಗಿ ಅಲ್ಲ.  ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ. ಮೇ.17 ಅಥವಾ 18ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಶೀರ್ವಾದದೊಂದಿಗೆ ರಾಜ್ಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವೆ ಎಂದು ಹೇಳಿದ್ದಾರೆ. 
ಬಿಜೆಪಿ ಚುನಾವಣಾ ಪ್ರಚಾರದ ಪಟ್ಟಿಯಲ್ಲಿ ಜನಾರ್ಧನ ರೆಡ್ಡಿಯವರ ಹೆಸರಿಲ್ಲ. ಪಕ್ಷದ ಪರವಾಗಿ ರೆಡ್ಡಿ ಪ್ರಚಾರ ಮಾಡುತ್ತಿಲ್ಲ. ತಮ್ಮ ಗೆಳೆಯ ಶ್ರೀರಾಮುಲು ಪರವಾಗಿ ಮಾಡುತ್ತಿದ್ದಾರೆಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. 
ಲೋಕಸಭಾ ಸದಸ್ಯರಾಗಿರುವ ಶ್ರೀರಾಮುಲು ಅವರು, ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಣಕ್ಕಿಳಿಯುತ್ತಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.