ಲೋಕಸಭಾ ಚುನಾವಣೆಯಲ್ಲಿ ಹಾಸನದಿಂದ ನನ್ನ ಮಗ ಸ್ಪರ್ಧೆಗಿಳಿಯಲ್ಲ; ಹೆಚ್.ಡಿ.ರೇವಣ್ಣ
2019 ಲೋಕಸಭಾ ಚುನಾವಣೆ ವೇಳೆ ಹಾಸನದಿಂದ ನನ್ನ ಮಗ ಪ್ರಜ್ವಲ್ ರೇವಣ್ಣ ಸ್ಪರ್ಧೆಗಿಳಿಯುವುದಿಲ್ಲ ಎಂದು ಸಚಿವ ಹೆಚ್.ಡಿ.ರೇವಣ್ಣ ಅವರು ಶನಿವಾರ ಹೇಳಿದ್ದಾರೆ...

Published On :
ಬೆಂಗಳೂರು: 2019 ಲೋಕಸಭಾ ಚುನಾವಣೆ ವೇಳೆ ಹಾಸನದಿಂದ ನನ್ನ ಮಗ ಪ್ರಜ್ವಲ್ ರೇವಣ್ಣ ಸ್ಪರ್ಧೆಗಿಳಿಯುವುದಿಲ್ಲ ಎಂದು ಸಚಿವ ಹೆಚ್.ಡಿ.ರೇವಣ್ಣ ಅವರು ಶನಿವಾರ ಹೇಳಿದ್ದಾರೆ.
ಈ ಹಿಂದೆ ಹೇಳಿಕೆ ನೀಡಿದ್ದ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು, ಮುಂಬರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಹಾಸನ ಕ್ಷೇತ್ರದಿಂದ ನನ್ನ ಮೊಮ್ಮಗ ಪ್ರಜ್ವಲ್ ಸ್ಪರ್ಧಿಸುತ್ತಾನೆಂದು ಹೇಳಿದ್ದರು. ಇದೀಗ ಬದಲಾದ ರಾಜಕೀಯ ಬೆಳವಣಿಗೆಗಳಿಂದಾಗಿ ದೇವೇಗೌಡ ಅವರೇ ಸ್ವತಃ ಹಾಸನ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲು ಮುಂದಾಗಿದ್ದಾರೆ.
ಈ ಹಿನ್ನಲೆಯಲ್ಲಿ ಸುದ್ದಿಗಾರರೊಂಡಿಗೆ ಮಾತನಾಡಿರುವ ರೇವಣ್ಣ ಅವರು, ಪಕ್ಷದ ಹಿಸಾಸಕ್ತಿಯಂತೆ ನನ್ನ ಮಗ ಕಾರ್ಯನಿರ್ವಹಿಸಲಿ. ಪ್ರಸ್ತುತ ಪ್ರಜ್ವಲ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾನೆ. ಭವಿಷ್ಯದಲ್ಲಿ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾನೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


