ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಬಳಿ ಧೈರ್ಯವಾಗಿ ಮಾತನಾಡೋ ತಾಕತ್ ಇಲ್ಲ: ಪ್ರಿಯಾಂಕ್ ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹೋಗಿ ಮಾತನಾಡುವ ತಾಕತ್ ಬಿಜೆಪಿಯವರಿಗೆ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ...

Published On :
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹೋಗಿ ಮಾತನಾಡುವ ತಾಕತ್ ಬಿಜೆಪಿಯವರಿಗೆ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ರಾಜ್ಯದಲ್ಲಿ ಮೂರು ಮುಖ್ಯಮಂತ್ರಿಗಳ ಆಡಳಿತ ಇದೆ ಎಂದು ಟ್ವೀಟ್ ಮಾಡುವ ರಾಜ್ಯ ಬಿಜೆಪಿ ನಾಯಕರಿಗೆ ಧೈರ್ಯವಾಗಿ ಪ್ರಧಾನಿ ಮೋದಿ ಮುಂದೆ ನಿಂತು ಮಾತನಾಡುವ ತಾಕತ್ ಇಲ್ಲ. ಅಂತಹವರು ಈ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ. ಹತಾಶೆಯಿಂದ ಬಿಜೆಪಿಯವರು ಹೀಗೆ ಮಾತನಾಡುತ್ತಿದ್ದಾರೆ ಎಂದರು.
ಕೇಂದ್ರ ಸರ್ಕಾರ, ರಾಜ್ಯಪಾಲರನ್ನು ದುರುಪಯೋಗ ಮಾಡಿಕೊಂಡು ಅಧಿಕಾರ ಪಡೆಯಲು ಹಿಂದೆ ಬಾಗಿಲಿನಿಂದ ಬಿಜೆಪಿ ಪ್ರಯತ್ನ ಮಾಡುತ್ತಿದೆ. ಬಿಜೆಪಿಯ ಎಲ್ಲಾ ಆಟಗಳನ್ನು ಜನ ನೋಡಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಬಳಿ ಮಾತನಾಡುವ ತಾಕತ್ ಬಿಜೆಪಿ ಅವರಿಗಿಲ್ಲ. ಹೀಗಾಗಿ ನಮ್ಮ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಯವರು ನಮ್ಮನ್ನು ಪ್ರಶಂಸೆ ಮಾಡೋದು ಬೇಡ ಅಂತ ಬಿಜೆಪಿ ನಾಯಕರ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


