ರಾಜಕೀಯ

ಲೋಕಸಭೆ ಚುನಾವಣಾ ಸಮರ: ಬೀದರ್ ನಿಂದ ಕಾಂಗ್ರೆಸ್ ಪ್ರಚಾರ ಆರಂಭಕ್ಕೆ ಸಿದ್ಧತೆ!

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಕುಮಾರ ಸ್ವಾಮಿ ಅಧಿಕಾರ ಸ್ವೀಕರಿಸಿದ ಮೇಲೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೊದಲ ಬಾರಿಗೆ ..

ಲೋಕಸಭೆ ಚುನಾವಣಾ ಸಮರ: ಬೀದರ್ ನಿಂದ ಕಾಂಗ್ರೆಸ್ ಪ್ರಚಾರ ಆರಂಭಕ್ಕೆ ಸಿದ್ಧತೆ!
ರಾಹುಲ್ ಗಾಂಧಿ
Published On :
ಕಲಬುರಗಿ: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಕುಮಾರ 
ಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೊದಲ ಬಾರಿಗೆ ಬೀದರ್ ಗೆ ಭೇಟಿ ನೀಡುತ್ತಿದ್ದಾರೆ.
ಆಗಸ್ಟ್ 13 ರಂದು ಬೀದರ್ ನಲ್ಲಿ ಜನಧ್ವನಿ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ಕೊಡಲಿದ್ದಾರೆ
ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿದ ಹಿನ್ನೆಲೆಯಲ್ಲಿಎಐಸಿಸಿ ಅಧ್ಯಕ್ಷರಿಗೆ ಅಭಿನಂದೆ ಸಮಾರಂಭ ಏರ್ಪಡಿಸಲಾಗಿದೆ ಎಂದು ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ತಿಳಿಸಿದೆ. 
ಇತ್ತೀಚೆಗೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ದೊಡ್ಡ 2ನೇ ಪಕ್ಷವಾಗಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜನರಿಗೆ  ಕೃತಜ್ಞತೆ ಸಲ್ಲಿಸಲು ರಾಹುಲ್ ಗಾಂಧಿ ಬೀದರ್ ಗೆ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಗೆಲ್ಲಿಸಬೇಕೇಂದು ಜನರಲ್ಲಿ ಮನವಿ ಮಾಡಲು ರಾಹುಲ್ ಗಾಂಧಿ ಬೀದರ್ ಗೆ ಆಗಮಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಬೀದರ್ ಮೇಲೆ ರಾಹುಲ್ ಗೆ ವಿಶೇಷ ಪ್ರೀತಿಯಿದ್ದು,ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಹೆಚ್ಚಿನ ಬಾರಿ ಬೀದರ್ ಗೆ ತೆರಳಿ ಅಲ್ಲಿನ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದರು. ಬಸವ ಕಲ್ಯಾಣಕ್ಕೆ ಭೇಟಿ ನೀಡಿದ್ದ ರಾಹುಲ್ ಹಲವು ಬಸವಣ್ಣನ ವಚನಗಳನ್ನು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.