ನಮ್ಮದು ಸ್ಥಿರ ಮೈತ್ರಿ, ರಾಜ್ಯದಲ್ಲಿ 5 ವರ್ಷ ಆಡಳಿತ ನಡೆಸುತ್ತೇವೆ: ಡಿ.ಕೆ. ಶಿವಕುಮಾರ್
ನಮ್ಮದು ಸ್ಥಿರ ಮೈತ್ರಿಯಾಗಿದ್ದು, ರಾಜ್ಯದಲ್ಲಿ 5 ವರ್ಷಗಳ ಕಾಲ ಆಡಳಿತ ನಡೆಸುತ್ತೇವೆಂದು ಸಚಿವ ಡಿ.ಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ...

Published On :
ಬೆಂಗಳೂರು: ನಮ್ಮದು ಸ್ಥಿರ ಮೈತ್ರಿಯಾಗಿದ್ದು, ರಾಜ್ಯದಲ್ಲಿ 5 ವರ್ಷಗಳ ಕಾಲ ಆಡಳಿತ ನಡೆಸುತ್ತೇವೆಂದು ಸಚಿವ ಡಿ.ಕೆ.ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ 10 ಶಾಸಕರು ಪಕ್ಷವನ್ನು ತೊರೆಯಲಿದ್ದಾರೆಂಬ ವರದಿಗಳ ವಿರುದ್ಧ ಕಿಡಿಕಾರಿರುವ ಅವರು, ಇವೆಲ್ಲಾ ವದಂತಿಗಳಷ್ಟೇ. ನಮ್ಮದು ಸ್ಥಿರ ಮೈತ್ರಿಯಾಗಿದ್ದು, ಸರ್ಕಾರ 5 ವರ್ಷಗಳ ಆಡಳಿತವನ್ನು ಪೂರೈಸಲಿದೆ. ಸರ್ಕಾರದ ಆಡಳಿತದಿಂದ ರಾಜ್ಯದ ಜನತೆ ಕೂಡ ಸಂತಸದಿಂದ ಇದ್ದಾರೆಂದು ಹೇಳಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಲು ಬಿಜೆಪಿ ರಣತಂತ್ರ ರೂಪಿಸುತ್ತಿದ್ದು, ಈಗಾಗಲೇ ಕಾಂಗ್ರೆಸ್'v 10 ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆಂಬ ವರದಿಗಳು ಇದೀಗ ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ.
ಕೆಲ ದಿನಗಳ ಹಿಂದಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು 5 ಕಾಂಗ್ರೆಸ್ ಶಾಸಕರು ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿರುವುದು ಬಿಜೆಪಿ ಆಪರೇಷನ್ ಕಮಲ ಮಾಡಿದೆಯಾ ಎಂಬ ಅನುಮಾನಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


