ಗಾಂಧಿ, ನೆಹರೂ ಟೀಕಿಸುವವರು ದ್ರೋಹಿಗಳು : ರಮಾನಾಥ್ ರೈ
ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗೂ ಮಾಜಿ ಪ್ರಧಾನಮಂತ್ರಿ ಜವಹರ್ ಲಾಲ್ ನೆಹರೂ ಅವರನ್ನು ಟೀಕಿಸುವವರು ದ್ರೋಹಿಗಳು ಎಂದು ಕಾಂಗ್ರೆಸ್ ನಾಯಕ ಬಿ. ರಮಾನಾಥ್ ರೈ ಕಿಡಿಕಾರಿದ್ದಾರೆ.

ಮಂಗಳೂರು: ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗೂ ಮಾಜಿ ಪ್ರಧಾನಮಂತ್ರಿ ಜವಹರ್ ಲಾಲ್ ನೆಹರೂ ಅವರನ್ನು ಟೀಕಿಸುವವರು ದ್ರೋಹಿಗಳು ಎಂದು ಕಾಂಗ್ರೆಸ್ ನಾಯಕ ಬಿ. ರಮಾನಾಥ್ ರೈ ಕಿಡಿಕಾರಿದ್ದಾರೆ.
ಕೆಲ ಕಿಡಿಗೇಡಿಗಳಿಂದ ಈ ನಾಯಕರ ನಿಲುವುಗಳನ್ನು ಟೀಕಿಸುವ ಕೃತ್ಯ ನಡೆಯುತ್ತಿದೆ. ಅಂತಹವರು ದೇಶ ವಿರೋಧಿಗಳು ಅಥವಾ ದ್ರೋಹಿಗಳು ಎಂದು ಕರೆದರು.
ಕ್ವಿಟ್ ಇಂಡಿಯಾ ಆಂದೋಲನಕ್ಕೆ 76 ವರ್ಷ ತುಂಬಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಇಬ್ಬರು ನಾಯಕರು ದೇಶಕ್ಕಾಗಿ ಮಾಡಿರುವ ತ್ಯಾಗವನ್ನು ಯಾರೂ ನಿರಾಕರಿಸುವಂತಿಲ್ಲ ಎಂದು ಹೇಳಿದರು.
ನೆಹರೂ, ಮಹಾತ್ಮಗಾಂಧಿ ವಿಚಾರದಲ್ಲಿ ತಪ್ಪಾಗಿ ಆರೋಪ ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ ಎನ್ನುವಂತೆ ಟೀಕಿಸಲಾಗುತ್ತಿದೆ. ಆದರೆ, ಈ ಇಬ್ಬರು ನಾಯಕರು ಮಾಡಿದ ತ್ಯಾಗ ಫಲವಾಗಿ ಇಂದು ನಾವು ಶಾಂತಿಯಿಂದ ಬದುಕುವಂತಾಗಿದೆ ಎಂದರು.
ಈ ಮಧ್ಯೆ ವೇದಿಕೆಯಲ್ಲಿಯೇ ಕಾಂಗ್ರೆಸ್ ಪಕ್ಷದ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯಿತು. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಲೊರೆನ್ಸ್ ಹಾಗೂ ಐಎನ್ ಟಿಯುಸಿಯ ಪುನೀತ್ ಶೆಟ್ಟಿ ಬೆಂಬಲಿಗರು ಪರಸ್ಪರ ಕಿತ್ತಾಡಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


