ಮೈಸೂರು, ಶಿವಮೊಗ್ಗ ,ತುಮಕೂರು ನಗರ ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 31ರಂದು ಮತದಾನ: 13ರಿಂದ ನಾಮಪತ್ರ ಸಲ್ಲಿಕೆ
ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಮಹಾನಗರ ಪಾಲಿಕೆಗೆ ಆಗಸ್ಟ್ 31ಕ್ಕೆ ಮತದಾನ ನಡೆಯಲಿದ್ದು, ಸೆಪ್ಟೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ...

Published On :
ಬೆಂಗಳೂರು: ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಮಹಾನಗರ ಪಾಲಿಕೆಗಳ ಮೀಸಲಾತಿ, ಕ್ಷೇತ್ರ ಪುನರ್ ವಿಂಗಡಣೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಘೋಷಿಸಿದೆ.
ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಮಹಾನಗರ ಪಾಲಿಕೆಗೆ ಆಗಸ್ಟ್ 31ಕ್ಕೆ ಮತದಾನ ನಡೆಯಲಿದ್ದು, ಸೆಪ್ಟೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
ಆಗಸ್ಟ್ 13ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಸಲು ಆರಂಭಿಸಬಹುದಾಗಿದೆ. ಆ.20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ, ಆ.21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಎಂದು ಹೇಳಿದೆ.
ಆಗಸ್ಟ್ 29ರಂದು ರಾಜ್ಯದ 29 ನಗರಸಭೆ, 53 ಪುರಸಭೆ ಹಾಗೂ 23 ಪಟ್ಟಣ ಪಂಚಾಯತ್ ಸೇರಿ ಒಟ್ಟು 105 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮೈಸೂರುMysuruTumakuruಶಿವಮೊಗ್ಗShivamoggacity corporation pollsAugust31. ತುಮಕೂರುನಗರ ಪಾಲಿಕೆ ಚುನಾವಣೆಆಗಸ್ಟ್ 31
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


