ರಾಜಕೀಯ

ಪ್ರಧಾನಿ ಮೋದಿ ದೇಶದ ಸರ್ವಾಧಿಕಾರಿ- ದಿನೇಶ್ ಗುಂಡೂರಾವ್

ಪ್ರಧಾನಿ ನರೇಂದ್ರಮೋದಿ ದೇಶದ ಸರ್ವಾಧಿಕಾರಿಯಾಗಿದ್ದು, ಜನರು ಭಯಭೀತಿಯಲ್ಲಿ ಬದುಕುವಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ  ದೇಶದ ಸರ್ವಾಧಿಕಾರಿ- ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Published On :

ಬೀದರ್ : ಪ್ರಧಾನಿ ನರೇಂದ್ರಮೋದಿ ದೇಶದ ಸರ್ವಾಧಿಕಾರಿಯಾಗಿದ್ದು, ಜನರು ಭಯಭೀತಿಯಲ್ಲಿ ಬದುಕುವಂತಾಗಿದೆ ಎಂದು  ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ಕಾರ್ಯಕ್ರಮದ ವೇದಿಕೆಯ ಪೂರ್ವಸಿದ್ಧತೆ  ಪರಿಶೀಲನೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರದ ವಿರುದ್ಧ ಯಾರೂ  ಮಾತನಾಡುತ್ತಿಲ್ಲ. ಆದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಸ್ಟ್ 13 ರಂದು ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಜನಧ್ವನಿ  ಕಾರ್ಯಕ್ರಮದಲ್ಲಿ ಮೋದಿ ಸರ್ಕಾರದ ವಿಫಲತೆ ವಿರುದ್ಧ ರಣಕಹಳೆ ಮೊಳಗಿಸಲಿದ್ದಾರೆ ಎಂದರು.

2013ರ ಲೋಕಸಭಾ  ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು  ಮೋದಿ ಸರ್ಕಾರ ಅನುಷ್ಟಾನಗೊಳಿಸಿಲ್ಲ, ವಿದೇಶದಲ್ಲಿರುವ ಕಪ್ಪು ಹಣವನ್ನು  ಭಾರತಕ್ಕೆ ತಂದು ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುವುದಾಗಿ ಹೇಳಿದ್ದ ಮೋದಿ ಭ್ರಷ್ಟಾಚಾರ ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ. ನೀರವ್ ಮೋದಿ ಮತ್ತಿತರು  ಬ್ಯಾಂಕುಗಳಿಂದ 75 ಸಾವಿರ ರೂ. ಲೂಟಿ ಹೊಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ  ಎಂದು ದಿನೇಶ್ ಗುಂಡೂರಾವ್ ಟೀಕಿಸಿದರು.

ಮೋದಿ ಸರ್ಕಾರದ ಅವಧಿಯಲ್ಲಿ ಆರ್ಥಿಕ ಬೆಳವಣಿಗೆ ಹಾಗೂ ಉದ್ಯೋಗವಕಾಶ ಕುಸಿದಿದೆ. ಭಯೋತ್ಪಾದಕತೆ ಹೆಚ್ಚಿದೆ ಮಹಿಳೆಯರ ಮೇಲೆ ದೌರ್ಜನ್ಯ  ಹೆಚ್ಚಿದೆ ಎಂದು ಆರೋಪಿಸಿದ ದಿನೇಶ್ ಗುಂಡೂರಾವ್ , ಅಚ್ಚೇ ದಿನ ಏಲ್ಲಿ   ಬಂದಿದೆ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.