ಅಪ್ಪನಾಣೆಗೂ ರಾಜಕಾರಣಿಗಳಿಂದ ದೇಶ ಉದ್ಧಾರವಾಗಲ್ಲ: ಜಿಟಿ ದೇವೇಗೌಡ ಹೇಳಿಕೆ ಚರ್ಚೆಗೆ ಗ್ರಾಸ
ದೇಶ ಅಭಿವೃದ್ಧಿ ಆಗಬೇಕಾದರೆ ಅದು ನಿಮ್ಮಂತಹ ವಿದ್ಯಾರ್ಥಿಗಳಿಂದ ಸಾಧ್ಯವೇ ಹೊರತು ರಾಜಕಾರಣಿಗಳಿಂದ ಅಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಅವರು ಹೇಳಿದ್ದಾರೆ...

Published On :
ಬೆಂಗಳೂರು: ದೇಶ ಅಭಿವೃದ್ಧಿ ಆಗಬೇಕಾದರೆ ಅದು ನಿಮ್ಮಂತಹ ವಿದ್ಯಾರ್ಥಿಗಳಿಂದ ಸಾಧ್ಯವೇ ಹೊರತು ರಾಜಕಾರಣಿಗಳಿಂದ ಅಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಅವರು ಹೇಳಿದ್ದಾರೆ.
ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ದೇಶ ಅಭಿವೃದ್ಧಿ ಕಾಣಬೇಕಾದರೆ ನಿಮ್ಮಂತ ವಿದ್ಯಾರ್ಥಿಗಳು ಮುಂದೆ ಬರಬೇಕು. ಅದನ್ನು ಬಿಟ್ಟು ರಾಜಕಾರಣಿಗಳು ದೇಶವನ್ನು ಅಭಿವೃದ್ಧಿ ಮಾಡುತ್ತಾರೆ ಎಂದು ಅದು ಅಸಾಧ್ಯದ ಮಾತು ಎಂದು ಅವರು ಹೇಳಿದ್ದು ಇದೀಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ಭಾಷಣ ಮಾಡುತ್ತಲೇ ಕೊನೆಯುಸಿರೆಳೆದರು. ಇದು ಶಿಕ್ಷಣದ ಮಹತ್ವ. ರಾಜಕಾರಣಿಗಳಿಂದ ಇದು ಸಾಧ್ಯವಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಮತ್ತು ಯುವಕರು ಆವಿಷ್ಕಾರಗಳನ್ನು ಕೈಗೊಳ್ಳುವ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.
ರಾಜಕಾರಣಿಗಳಿಂದ ದೇಶ ಉದ್ಧಾರವಾಗಲ್ಲ ಎಂದು ಜಿಟಿ ದೇವೇಗೌಡ ಅವರು ಹೇಳಿದ್ದು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSವಿದ್ಯಾರ್ಥಿಗಳುಜೆಡಿಎಸ್politiciansStudentsರಾಜಕಾರಣಿದೇಶದ ಅಭಿವೃದ್ಧಿGT Devegowdaಜಿಟಿ ದೇವೇಗೌಡCountry Progress
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


