ರಾಜಕೀಯ

ಸರ್ಕಾರ ಇನ್ನೂ ಮೂರು ತಿಂಗಳ ಮಗುವಷ್ಟೇ: ದಿನೇಶ್ ಗುಂಡೂರಾವ್

ಸರ್ಕಾರ ಇನ್ನು ಮೂರು ತಿಂಗಳ ಮಗುವಷ್ಟೇ. ಪಕ್ಷದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಈಗಲೇ ಆಯ್ಕೆ ಮಾಡುವುದು ಸೂಕ್ತವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ...

ಸರ್ಕಾರ ಇನ್ನೂ ಮೂರು ತಿಂಗಳ ಮಗುವಷ್ಟೇ: ದಿನೇಶ್ ಗುಂಡೂರಾವ್
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
Published On :
ಬೆಂಗಳೂರು: ಸರ್ಕಾರ ಇನ್ನು ಮೂರು ತಿಂಗಳ ಮಗುವಷ್ಟೇ. ಪಕ್ಷದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಈಗಲೇ ಆಯ್ಕೆ ಮಾಡುವುದು ಸೂಕ್ತವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ. 
ಸಿದ್ದರಾಮಯ್ಯ ಅವರ ಮತ್ತೆ ಸಿಎಂ ಆಗುವ ಹೇಳಿಕೆ ಕುರಿತಂತೆ ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆದಿರುವ ಅವರು, ಸಿದ್ದರಾಮಯ್ಯ ಅವರು ಅಧಿಕಾರದ ಆಸೆ ಇರುವವರಲ್ಲ. ಹೀಗಾಗಿ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎನ್ನುವ ಮಾಜಿ ಮುಖ್ಯಮಂತ್ರಿ ಸಿದ್ದರಾಯ್ಯ ಅವರ ಒಂದು ಹೇಳಿಕೆಗೆ ನೂರು ಅರ್ಥ ಕಲ್ಪಿಸಬೇಕಿಲ್ಲ ಎಂದು ಹೇಳಿದ್ದಾರೆ. 
ಪ್ರಸ್ತುತ ಸರ್ಕಾರ ಇನ್ನೂ ಮೂರು ತಿಂಗಳ ಮಗುವಷ್ಟೇ. ಪಕ್ಷದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇಷ್ಟು ಬೇಗ ಆಯ್ಕೆ ಮಾಡಲು ಸಾಧ್ಯವಿಲ್ಲ. ಪ್ರಸ್ತುತ ಇರುವ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ತಿಗೊಳಿಸಲಿದೆ. ಮೈತ್ರಿ ಧರ್ಮ ಪಾಲನೆ ಮಾಡುತ್ತೇವೆಂದು ತಿಳಿಸಿದ್ದಾರೆ. 
ಇದರಂತೆ ಶಾಸಕ ಸತೀಶ್ ಜಾರಕಿಹೊಳಿಯವರು ಕೂಡ ಪ್ರತಿಕ್ರಿಯೆ ನೀಡಿ, 120 ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿದ್ದರೆ ಸಿದ್ದರಾಮಯ್ಯನವರೇ ಸಿಎಂ ಆಗುತ್ತಿದ್ದರು. ಜನರು ಯಾರಿಗೂ ಸ್ಪಷ್ಟ ಬಹುಮತ ನೀಡದ ಹಿನ್ನಲೆಯಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲಾಗಿದೆ. ಇದೇ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ. 5 ವರ್ಷಗಳ ಕಾಲ ಕುಮಾರಸ್ವಾಮಿ ಮುಖ್ಯಮಂತ್ರಿ, ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿರುತ್ತಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.