ಮುಂದಿನ ತಿಂಗಳು ರಾಜ್ಯ ಸಂಪುಟ ವಿಸ್ತರಣೆ - ಕೆಪಿಸಿಸಿ ಅಧ್ಯಕ್ಷ
ಮುಂದಿನ ತಿಂಗಳು ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಎಲ್ಲಾ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರು: ಮುಂದಿನ ತಿಂಗಳು ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಎಲ್ಲಾ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ವೈಫಲ್ಯತೆಗಳನ್ನು ವಿವರಿಸಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವ ಜನರನ್ನು ಕಾಂಗ್ರೆಸ್ ಪಕ್ಷ ಎದುರು ನೋಡುತ್ತಿರುವುದಾಗಿ ರಾವ್ ತಿಳಿಸಿದರು.
ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರಸರ್ಕಾರ ದೇಶವನ್ನು ಅಪಾಯದ ಸ್ಥಿತಿಗೆ ತಳ್ಳುತ್ತಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲ. ಉದ್ಯೋಗ ಇಲ್ಲದೆ ನಿರುದ್ಯೋಗ ಸಮಸ್ಯೆ ತೀವ್ರಗೊಂಡಿದೆ ಎಂದು ಆರೋಪಿಸಿದರು.
ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ಮುಕ್ತ ರಾಷ್ಟ್ರವನ್ನಾಗಿ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದ ಪ್ರಧಾನಿ ವಿದೇಶಿ ಬ್ಯಾಂಕುಗಳಿಂದ ಕಪ್ಪು ಹಣವನ್ನು ವಾಪಾಸ್ ತರುವಲ್ಲಿ ವಿಫಲರಾಗಿದ್ದಾರೆ. ಮಹಿಳಾ ಸುರಕ್ಷತೆಗೆ ಸಂಬಂಧಿಸಿದಂತೆ ನೀಡಿದ ಮಾತನ್ನು ಉಳಿಸಿಕೊಂಡಿಲ್ಲ ಎಂದು ದಿನೇಶ್ ಗುಂಡೂರಾವ್ ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


