ರಾಜಕೀಯ

ಕೊಡಗು ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ: ಸಿದ್ದರಾಮಯ್ಯ

ಮೈಸೂರು ಜಿಲ್ಲೆ ಸೇರಿ ರಾಜ್ಯದ ಹಲವೆಗೆ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದರೂ, ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಕೊಡಗು ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ: ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
Published On :
ಮೈಸೂರು: ಮೈಸೂರು ಜಿಲ್ಲೆ ಸೇರಿ ರಾಜ್ಯದ ಹಲವೆಗೆ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದರೂ, ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಲು ಜಿಲ್ಲೆಯ ಪುನರ್ವಸತಿ ನಿರ್ಮಾಣಕ್ಕಾಗಿ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರದ ಬಳಿ ಮನವಿ ಮಾಡಿಕೊಳ್ಳಲಾಗಿದ್ದು, ಮನವಿ ಮಾಡಿಕೊಂಡ ದಿನದಿಂದಲೂ ಈವರೆಗೂ ಒಂದು ರುಪಾಯಿ ಹಣವನ್ನೂ ಕೂಡ ಬಿಡುಗಡೆ ಮಾಡಿಲ್ಲ. ಪ್ರವಾಹದಿಂದಾಗಿ ರಾಜ್ಯಕ್ಕೆ ಭಾರೀ ನಷ್ಟ ಉಂಟಾಗಿದೆ. ಕೇರಳ ರಾಜ್ಯಕ್ಕೆ ಎದುರಾಗಿರುವ ದುರಂತಕ್ಕೆ ಹೋಲಿಕೆ ಮಾಡಿದರೆ, ನೀಡಿರುವ ಪರಿಹಾರ ಪ್ರಮಾಣ ಸೂಕ್ತವಾಗಿಲ್ಲ ಎಂದು ಹೇಳಿದ್ದಾರೆ. 
ಇದೇ ವೇಳೆ ಕೊಡಲು ಜಿಲ್ಲೆಗೆ ಭೇಟಿ ನೀಡಿದ್ದರೂ ಯಾವುದೇ ರೀತಿಯ ಪರಿಹಾರ ಘೋಷಣೆಗಳನ್ನು ಮಾಡದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಸಿದ್ದರಾಮಯ್ಯ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 
ಪ್ರಧಾನಮಂತ್ರಿಗಳ ಬದಲಾಗಿ ರಕ್ಷಣಾ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದರು. ಕೊಡಗು ಜಿಲ್ಲೆಗೆ ಭೇಟಿ ನೀಡುವುದಕ್ಕೂ ಮುನ್ನ ಸಚಿವರು ರಾಜ್ಯ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ, ಪರಿಹಾರ ಘೋಷಣೆಗಳನ್ನು ಮಾಡಬೇಕಿತ್ತು. ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಸ್ಥಳೀಯ ಸದಸ್ಯರಾಗಿದ್ದು, ರಾಜ್ಯದ ಪರವಾಗಿ ಜವಾಬ್ದಾರಿಯನ್ನು ಹೊಂದಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.