ಮತ್ತೆ ರಾಜ್ಯದ ಸಿಎಂ ಆಗುವೆ: ಹೇಳಿಕೆ ಸಮರ್ಥಿಸಿಕೊಂಡ ಸಿದ್ದರಾಮಯ್ಯ
ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಸಾಕಷ್ಟು ಚರ್ಚೆಗಳಿಗೆ ಕಾರಣವಾದ ಹಿನ್ನಲೆಯಲ್ಲಿ ತಮ್ಮ ಹೇಳಿಕೆಯನ್ನು ಸಿದ್ದರಾಮಯ್ಯ ಅವರು ಶನಿವಾರ ಸಮರ್ಥಿಸಿಕೊಂಡಿದ್ದಾರೆ...

Published On :
ಮೈಸೂರು: ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಸಾಕಷ್ಟು ಚರ್ಚೆಗಳಿಗೆ ಕಾರಣವಾದ ಹಿನ್ನಲೆಯಲ್ಲಿ ತಮ್ಮ ಹೇಳಿಕೆಯನ್ನು ಸಿದ್ದರಾಮಯ್ಯ ಅವರು ಶನಿವಾರ ಸಮರ್ಥಿಸಿಕೊಂಡಿದ್ದಾರೆ.
ಹೇಳಿಕೆ ಕುರಿತಂತೆ ಹಾಸನದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದೆ. ಇದರಲ್ಲಿ ತಪ್ಪೇನಿದೆ? ನಮ್ಮ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಲಾದೀತೆ? ಎಂದು ಪ್ರಶ್ನಿಸಿದ್ದಾರೆ.
ಜನರ ಆಶೀರ್ವಾದವಿದ್ದರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದಾನೆ. ನಾನು ಮಾಡಿದ ಕೆಲಸ ನೋಡಿ ಜನರ ಆಶೀರ್ವಾದ ಮಾಡಬೇಕಿತ್ತು. ಆದರೆ, ವಿರೋಧಿಗಳೆಲ್ಲ ಒಂದಾಗಿದ್ದರಿಂದ ಸಾಧ್ಯವಾಗಿಲ್ಲ. ಜನರ ಆಶೀರ್ವಾದ ಇದ್ದರೆ, ಏಕೆ ಸಾಧ್ಯವಾಗುವುದಿಲ್ಲ ಎಂದಷ್ಟೇ ಹೇಳಿದ್ದೆನೇ ಹೊರತು ಅದಕ್ಕೆ ಯಾರು ಏನೋ ಅರ್ಥ ಕಲ್ಪಿಸಿಕೊಂಡರೆ ಎನು ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಜನರ ಕೇಳಿದಾಗ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎನ್ನಲು ಆಗುತ್ತದೆಯೇ? ಮುಂದಿನ ಚುನಾವಣೆ ಐದು ವರ್ಷಗಳ ನಂತರವೇ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


