ರಫೇಲ್ ಒಪ್ಪಂದ ಕುರಿತ ರಹಸ್ಯಗಳನ್ನು ಬಹಿರಂಗಪಡಿಸಲು ಕಾಂಗ್ರೆಸ್ ನಿರ್ಧಾರ
ರಫೇಲ್ ಒಪ್ಪಂದ ಕುರಿತಂತೆ ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಇದೀಗ ರಫೇಲ್ ಒಪ್ಪಂದ ಕುರಿತ ರಹಸ್ಯಗಳನ್ನು ಜನರಿಗೆ...

Published On :
ಮೈಸೂರು: ರಫೇಲ್ ಒಪ್ಪಂದ ಕುರಿತಂತೆ ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಇದೀಗ ರಫೇಲ್ ಒಪ್ಪಂದ ಕುರಿತ ರಹಸ್ಯಗಳನ್ನು ಜನರಿಗೆ ತಿಳಿಸಲು ನಿರ್ಧರಿಸಿದ್ದಾರೆ.
ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರ ರಫೇಲ್ ಒಪ್ಪಂದದಲ್ಲಿ ಮಾಡಿಕೊಂಡಿರುವ ರಹಸ್ಯಗಳು ಹಾಗೂ ಸತ್ಯಗಳನ್ನು ಜನರಿಗೆ ತಿಳಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಈ ಕುರಿತಂತೆ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಕೇಂದ್ರ ಸಚಿವ ಪಲ್ಲಮ್ ರಾಜು ಅವರು, ರಫೇಲ್ ಒಪ್ಪಂದ ಕುರಿತಂತಿರುವ ಕೆಲ ರಹಸ್ಯಗಳು ನಮಗೆ ದೊರಕಿದ್ದು, ಕಣ್ಣಿಗೆ ಕಾಣದ ಸತ್ಯಗಳನ್ನು ಸಾರ್ವಜನಿಕರಿಗೆ ತಿಳಿಸುವ ಪ್ರಯತ್ನಗಳನ್ನು ಮಾಡುತ್ತೇವೆ. ಈ ರಹಸ್ಯಗಳನ್ನು ಸಾಬೀತು ಮಾಡಲು ನಮ್ಮ ಬಳಿ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದ ಅವರು, ರೂ.526.10 ಕೋಟಿಗೆ 126 ರಫೇಲ್ ಯುದ್ಧ ವಿಮಾನಗಳನ್ನು ಖರೀದಿ ಮಾಡಲು ಕಾಂಗ್ರೆಸ್ ಸರ್ಕಾರ ಫ್ರಾನ್ಸ್ ಜೊತೆಗೆ ಒಪ್ಪಂದ ಮಾಡಿಕೊಂಡಿತ್ತು. ಆದರೆ, ಪ್ರಸ್ತುತ ಆಡಳಿತದಲ್ಲಿರುವ ಸರ್ಕಾರ ಅದರ ಮೊತ್ತವನ್ನು ರೂ.1,670 ಕೋಟಿಗೆ ಹೆಚ್ಚಿಸಿದೆ. ಇದರಿಂದ ರೂ.41,205 ಕೋಟಿ ನಷ್ಟವಾಗಲಿದೆ ಎಂದು ತಿಳಿಸಿದರು.
ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಫೇಲ್ ಒಪ್ಪಂದವೊಂದು ದೊಡ್ಡ ಹಗರಣ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


