ಆಗಸ್ಟ್ 31ಕ್ಕೆ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆ ನಿಗದಿ
ಕಾಂಗ್ರೆಸ್ -ಜೆಡಿಎಸ್ ಸಮನ್ವಯ ಸಮಿತಿ ಸಭೆ ಇದೇ ತಿಂಗಳ 31ರಂದು ನಿಗದಿಯಾಗಿದೆ. ಸಮನ್ವಯ ...

ಬೆಂಗಳೂರು: ಕಾಂಗ್ರೆಸ್ -ಜೆಡಿಎಸ್ ಸಮನ್ವಯ ಸಮಿತಿ ಸಭೆ ಇದೇ ತಿಂಗಳ 31ರಂದು ನಿಗದಿಯಾಗಿದೆ. ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿದೇಶಿ ಪ್ರವಾಸ ಕೈಗೊಳ್ಳುವುದರಿಂದ ಅದಕ್ಕೆ ಮೊದಲು ಸಮನ್ವಯ ಸಮಿತಿ ಸಭೆ ನಡೆಸಬೇಕೆಂದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ.
ಸಭೆಯಲ್ಲಿ ಮುಖ್ಯವಾಗಿ ಚರ್ಚೆಯಾಗಬೇಕಾದ ವಿಷಯಗಳನ್ನು ಪಟ್ಟಿ ಮಾಡುವಂತೆ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿಯವರಿಗೆ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಸಮ್ಮಿಶ್ರ ಸರ್ಕಾರದ ಮುಂದಿನ ಆದ್ಯತೆಯ ಕೆಲಸಗಳು, ನಾಯಕರ ನಡುವಿನ ಭಿನ್ನಾಭಿಪ್ರಾಯ ಮೊದಲಾದವುಗಳ ಕುರಿತು ಚರ್ಚಿಸಿ ಸರ್ಕಾರ ಸುಗಮವಾಗಿ ನಡೆದುಕೊಂಡು ಹೋಗುವಂತೆ ಮಾಡಲು ಸಮನ್ವಯ ಸಮಿತಿ ಸಭೆ ಕರೆಯಲಾಗುತ್ತದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಶೀತಲ ಸಮರದಿಂದ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ನಡೆಯುತ್ತಿಲ್ಲ ಎಂದು ಹೇಳಲಾಗುತ್ತಿತ್ತು. ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ನಡೆಯಲು ತಿಂಗಳಿಗೊಮ್ಮೆ ಸಮನ್ವಯ ಸಮಿತಿ ಸಭೆ ನಡೆಯಬೇಕು ಎಂದು ತೀರ್ಮಾನಿಸಲಾಗಿತ್ತಾದರೂ ಸಮ್ಮಿಶ್ರ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದರೂ ಎರಡು ಬಾರಿಯಷ್ಟೇ ಸಭೆ ನಡೆದಿದೆ. ಜುಲೈ 28 ಕ್ಕೆ ಸಮನ್ವಯ ಸಮಿತಿ ನಿಗದಿಯಾಗಿತ್ತಾದರೂ ಸಿಎಂ ಎಚ್.ಡಿ.ಕುಮಾರ ಸ್ವಾಮಿ ಪ್ರವಾಸದಲ್ಲಿದ್ದ ಕಾರಣ ಮುಂದೂಡಲ್ಪಟ್ಟಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


