ಮತಗಳಿಕೆಗಾಗಿ ಮಾತ್ರ ಬಿಜೆಪಿ ಟಿಪ್ಪು ಸುಲ್ತಾನ್ ರನ್ನು ವಿರೋಧಿಸುತ್ತಿದೆ: ಸಚಿವ ಜಮೀರ್ ಹೇಳಿಕೆ
ಮತ ಗಳಿಕೆಗಾಗಿ ಮಾತ್ರ ಬಿಜೆಪಿ ಪಕ್ಷ ಟಿಪ್ಪು ಸುಲ್ತಾನ್ ರನ್ನು ವಿರೋಧಿಸುತ್ತಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

Published On :
ಹಾವೇರಿ: ಮತ ಗಳಿಕೆಗಾಗಿ ಮಾತ್ರ ಬಿಜೆಪಿ ಪಕ್ಷ ಟಿಪ್ಪು ಸುಲ್ತಾನ್ ರನ್ನು ವಿರೋಧಿಸುತ್ತಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಬಿಜೆಪಿಗೆ ಮತಗಳಿಕೆಗಾಗಿ ಟಿಪ್ಪು ಸುಲ್ತಾನ್ ರನ್ನು ಅವಲಂಭಿಸಿದೆ. ಬಿಜೆಪಿಯವರು ರಾಜಕೀಯ ಮಾಡಲು ಟಿಪ್ಪುರನ್ನು ವಿರೋಧಿಸುತ್ತಾರೆ ಎಂದು ಹೇಳಿದರು.
'ಬೆಂಗಳೂರಿನ ಹಝ್ ಭವನಕ್ಕೆ ಟಿಪ್ಪು ಹೆಸರಿಡುವ ವಿಚಾರದಲ್ಲಿಯೂ ಇದೇ ಕಾರಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ರಾಜಕೀಯ ಮಾಡುತ್ತಿದ್ದಾರೆ. ದೇಶಕ್ಕೆ ಟಿಪ್ಪು ಅಪಾರ ಕೊಡುಗೆ ನೀಡಿದ್ದಾರೆ ಎನ್ನುವುದು ಬಿಜೆಪಿಗೆ ಗೊತ್ತಿದೆ. ಟಿಪ್ಪು ವಿರೋಧಿಸಿದರೆ ಮಾತ್ರ ಬಿಜೆಪಿಗೆ ಮತ ಬೀಳಲು ಸಾಧ್ಯ ಎಂದು ಹೇಳಿದರು.
ಅಂತೆಯೇ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಉರುಳಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ಸರ್ಕಾರ 5 ವರ್ಷ ಆಡಳಿತ ನಡೆಸಲಿದೆ. ಮೈತ್ರಿ ಸರ್ಕಾರ ಉರುಳುತ್ತದೆ ಎಂಬ ಕುರಿತು ಆತಂಕ ಪಡುವ ಅಗತ್ಯವಿಲ್ಲ. ಕುಮಾರಸ್ವಾಮಿ 5 ವರ್ಷ ಸಿಎಂ ಆಗಿರುತ್ತಾರೆ ಎಂದು ರಾಹುಲ್ ಗಾಂಧಿಯವರೇ ಹೇಳಿದ್ದಾರೆ. ಹೈಕಮಾಂಡ್ ತೀರ್ಮಾನವೇ ನಮ್ಮ ತೀರ್ಮಾನ. ಆದರೆ 2023ರ ವಿಧಾನಸಭೆ ಚುನಾವಣೆ ಬಳಿಕ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವುದೇ ನಮ್ಮ ಗುರಿ. ಸಿದ್ದರಾಮಯ್ಯ ಅವರ ಆಡಳಿತ ನೋಡಿದ ಜನತೆಯೇ ಅವರು ಮತ್ತೆ ಸಿಎಂ ಆಗಲಿ ಎಂದು ಬಯಸುತ್ತಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Zameer ahmed khanಜಮೀರ್ ಅಹ್ಮದ್ ಖಾನ್Haveriಹಾವೇರಿಟಿಪ್ಪು ಸುಲ್ತಾನ್Tippu SultanKarnataka politicsಕರ್ನಾಟಕ ರಾಜಕೀಯ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


