ರಾಜಕೀಯ

ಸಿಎಂ ಎಚ್ ಡಿಕೆಗೆ ಸರ್ಕಾರ ಉಳಿಸಿಕೊಳ್ಳುವುದೇ ದೊಡ್ಡ ಚಿಂತೆ: ಬಿಜೆಪಿ

100 ದಿನ ಪೂರೈಸಿದ ಸಂಭ್ರಮದಲ್ಲಿರುವ ಕಾಂಗ್ರೆಸ್ - ಜೆಡಿಎಸ್ ದೋಸ್ತಿ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ....

ಸಿಎಂ ಎಚ್ ಡಿಕೆಗೆ ಸರ್ಕಾರ ಉಳಿಸಿಕೊಳ್ಳುವುದೇ ದೊಡ್ಡ ಚಿಂತೆ: ಬಿಜೆಪಿ
ಎಚ್ ಡಿ ಕುಮಾರಸ್ವಾಮಿ
Published On :
ಬೆಂಗಳೂರು: 100 ದಿನ ಪೂರೈಸಿದ ಸಂಭ್ರಮದಲ್ಲಿರುವ ಕಾಂಗ್ರೆಸ್ - ಜೆಡಿಎಸ್ ದೋಸ್ತಿ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದು, ಅಭಿವೃದ್ಧಿ ಕಾರ್ಯಗಳು ನೆಲಕಚ್ಚಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸರ್ಕಾರ ಉಳಿಯುತ್ತಾ ಅಥವಾ ಉರುಳುತ್ತಾ ಎಂಬುದೇ ದೊಡ್ಡ ಚಿಂತೆಯಾಗಿದೆ ಎಂದು ಆರೋಪಿಸಿದೆ.
ಸಾಮಾಜಿಕ ತಾಣ ಫೇಸ್ ಬುಕ್ ಸರಣಿ ಪೋಸ್ಟ್ ಗಳನ್ನು ಮಾಡಿದ ಬಿಜೆಪಿ, ಸಮ್ಮಿಶ್ರ ಸರ್ಕಾರದ 100 ದಿನಗಳ ಆಚರಣೆಯಲ್ಲಿ ಭಾಗವಹಿಸಲು ಕುಮಾರಣ್ಣನಿಗೆ ಆಸಕ್ತಿ ಇಲ್ಲ ಎಂದಿದೆ.
ಇನ್ನು ಟ್ವೀಟರ್ ನಲ್ಲಿ ಸಮ್ಮಿಶ್ರ ಸರ್ಕಾರಕ್ಕೆ 100 ದಿನಗಳು, ಹೋದಲ್ಲೆಲ್ಲ ಕಣ್ಣೀರು, ಅಭಿವೃದ್ಧಿಗೆ ಎಳ್ಳು ನೀರು ಎಂದು ವ್ಯಂಗ್ಯವಾಡಿದೆ.
ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಜೆಡಿಎಸ್ ಹೇಳಿತ್ತು. ಆದರೆ 100 ದಿನ ಕಳೆದರೂ ರೈತರ ಸಾಲ ಮನ್ನಾ ಮಾಡಿದ ಒಂದೇ ಒಂದು ಸರ್ಟಿಫಿಕೆೇಟ್ ನೀಡಿಲ್ಲ ಎಂದು ಬಿಜೆಪಿ ದೂರಿದೆ. ಅಲ್ಲದೆ ಅಪವಿತ್ರ ಮೈತ್ರಿಯಲ್ಲಿನ ತೀವ್ರ ಭಿನ್ನಮತದ ನಡುವೆಯೂ ನಿಮ್ಮ ಸರ್ಕಾರ 100 ದಿನಗಳನ್ನು ಪೂರೈಸಿರುವುದಕ್ಕೆ ಅಭಿನಂದನೆಗಳು' ಎಂದು ಕಾಲೆಳೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.