'ಕಿರಿಕ್' ನಾಯಕರ ಕೈಬಿಟ್ಟು, ಸರ್ಕಾರ ಸುಗಮವಾಗಿ ಸಾಗಲು ಸಹಾಯ ಮಾಡಿ: ರಾಹುಲ್'ಗೆ ಕುಮಾರಸ್ವಾಮಿ
ಆಡಳಿತ ನಡೆಸಲು ಬಿಡದೆ ಕಿರಿಕಿರಿಯುಂಟು ಮಾಡುವ ನಾಯಕರನ್ನು ಕೈಬಿಟ್ಟು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಗಮವಾಗಿ ಸಾಗಲು ಸಹಾಯ ಮಾಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಮನವಿ ಮಾಡಿಕೊಂಡಿದ್ದಾರೆ...

Published On :
ಬೆಂಗಳೂರು: ಆಡಳಿತ ನಡೆಸಲು ಬಿಡದೆ ಕಿರಿಕಿರಿಯುಂಟು ಮಾಡುವ ನಾಯಕರನ್ನು ಕೈಬಿಟ್ಟು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಗಮವಾಗಿ ಸಾಗಲು ಸಹಾಯ ಮಾಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಮೈತ್ರಿ ಸರ್ಕಾರ ಆಡಳಿತಕ್ಕೆ ಬಂದು 100 ದಿನಗಳು ಕಳೆದಿರುವ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿಯಾದ ಕುಮಾರಸ್ವಾಮಿಯವರು, ಸಿದ್ದರಾಮಯ್ಯ ಹಾಗೂ ಇತರೆ ಕಾಂಗ್ರೆಸ್ ನಾಯಕರಿಂದ ಎದುರಾಗುತ್ತಿರುವ ಸಮಸ್ಯೆಗಳ ಕುರಿತಂತೆ ರಾಹುಲ್ ಗಾಂಧಿಯವರಿಗೆ ದೂರು ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಮೈತ್ರಿ ಸರ್ಕಾರಕ್ಕೆ ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಹೀಗಾಗಿ ಶೀಘ್ರಗತಿಯಲ್ಲಿ ಸಂಪುಟ ವಿಸ್ತರಣೆ ಮಾಡಿ ನಾಯಕರನ್ನು ನೇಮಕ ಮಾಡುವಂತೆ ಇದೇ ವೇಳೆ ಕುಮಾರಸ್ವಾಮಿಯವರು ಮನವಿ ಮಾಡಿಕೊಂಡಿದ್ದಾರೆ.
ರಾಹುಲ್ ಗಾಂಧಿಯವರೊಂದಿಗೆ 15 ನಿಮಿಷಗಳ ಕಾಲ ಮಾತುಕತೆ ನಡೆಸಿದ ಕುಮಾರಸ್ವಾಮಿಯವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜಕೀಯದ ಬಗ್ಗೆ ಚರ್ಚೆಗಳನ್ನು ನಡೆಸಿಲ್ಲ. ಮೈತ್ರಿ ಸರ್ಕಾರ ಸುಗಮವಾಗಿ ಸಾಗುವ ಕುರಿತಂತೆ ರಾಹುಲ್ ಜೊತೆಗೆ ಮಾತುಕತೆ ನಡೆಸಿದ್ದೇನೆಂದು ತಿಳಿಸಿದರು.
ಕುಮಾರಸ್ವಾಮಿಯವರ ಮಾತುಗಳನ್ನು ತಾಳ್ಮೆಯಿಂದ ಕೇಳಿರುವ ರಾಹುಲ್ ಗಾಂಧಿಯವರು ಶೀಘ್ರದಲ್ಲಿಯೇ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಠಿಣ ಸಂದೇಶ ರವಾನೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಮಾತುಕತೆ ವೇಳೆ ಕುಮಾರಸ್ವಾಮಿಯವರು ಸಿದ್ದರಾಮಯ್ಯ ಅವರು ಮೈತ್ರಿ ಸರ್ಕಾರಕ್ಕೆ ಕಂಟಕವಾಗಿರುವ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSದೆಹಲಿSiddaramaiahಸಿದ್ದರಾಮಯ್ಯKarnatakaಕರ್ನಾಟಕಜೆಡಿಎಸ್DelhiHD Kumaraswamyರಾಹುಲ್ ಗಾಂಧಿಹೆಚ್.ಡಿ.ಕುಮಾರಸ್ವಾಮಿRahulgandhi
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


