ಕೆಲ ಶಾಸಕರಲ್ಲಿ ಅಸಮಾಧಾನ: ಸತೀಶ್ ಹೇಳಿಕೆಯಿಂದ ಕಾಂಗ್ರೆಸ್ ತಲ್ಲಣ!
ಕಾಂಗ್ರೆಸ್ ಪಕ್ಷದ ಕೆಲ ಶಾಸಕರಲ್ಲಿ ಅಸಮಾಧಾನ ಇರುವುದು ನಿಜ. ಅವರ ಮನವೊಲಿಸಲು ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ದೃಢಪಟ್ಟಿದೆ.

ಬೆಳಗಾವಿ: ಕಾಂಗ್ರೆಸ್ ಪಕ್ಷದ ಕೆಲ ಶಾಸಕರಲ್ಲಿ ಅಸಮಾಧಾನ ಇರುವುದು ನಿಜ. ಅವರ ಮನವೊಲಿಸಲು ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ದೃಢಪಟ್ಟಿದೆ.
ಕೆಲ ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದಾರೆ. ಆದರೆ, 25 ರಿಂದ 30 ರಷ್ಟು ಶಾಸಕರಲ್ಲ, 6 ರಿಂದ 7 ಶಾಸಕರು ಅಸಮಾಧಾನಗೊಂಡಿದ್ದು, ನಾಯಕರು ಅವರನ್ನು ಮನವೊಲಿಸುತ್ತಾರೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆದಾಗ್ಯೂ, ಪ್ರತಿಪಕ್ಷ ಬಿಜೆಪಿ ಕುದುರೆ ವ್ಯಾಪಾರ ಮೂಲಕ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ . ಆದರೆ, ಆರೇಳು ಶಾಸಕರಿಗೆ ಮಾತ್ರ ಅಸಮಾಧಾನವಿದ್ದು, ಅವರನ್ನು ಸಮಾಧಾನಪಡಿಸುವ ಕೆಲಸ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಚಿವರಿಗಿಂತಲೂ ತಾವೂ ಬಲವಾಗಿದ್ದು, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಈ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜೊತೆಗೆ ಮಾತುಕತೆ ನಡೆಸಿದ್ದು, ಹೈಕಮಾಂಡ್ ಚುರುಕಾಗಿದೆ. ಅತೃಪ್ತಿ ಹೊಂದಿರುವಂತಹ ಶಾಸಕರು ಪಕ್ಷ ಬಿಡುವುದಿಲ್ಲ. ಎಲ್ಲವೂ ಸದ್ಯದಲ್ಲಿಯೇ ಬಗೆಹರಿಯಲಿದೆ ಎಂದು ಸತೀಶ್ ಜಾರಕಿ ಹೊಳಿ ಭರವಸೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


