ರಾಜಕೀಯ

ಲೋಕಸಭೆ ಚುನಾವಣೆವರೆಗೂ ಸಂಪುಟ ವಿಸ್ತರಣೆ ಅನುಮಾನ: ಶಾಸಕ ಗಣೇಶ್‌

ಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆ ನಿರ್ಧರಿಸಿದೆ.

ಲೋಕಸಭೆ ಚುನಾವಣೆವರೆಗೂ ಸಂಪುಟ ವಿಸ್ತರಣೆ ಅನುಮಾನ: ಶಾಸಕ ಗಣೇಶ್‌
ಜೆಎನ್ ಗಣೇಶ್
Published On :
ಬೆಂಗಳೂರು: ಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆ ನಿರ್ಧರಿಸಿದೆ.
ಆದರೆ  ಲೋಕಸಭೆ ಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆ ಆಗುವುದಿಲ್ಲ ಎಂದು ಕಂಪ್ಲಿ ಕಾಂಗ್ರೆಸ್‌ ಶಾಸಕ ಗಣೇಶ್‌ ಅವರು ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಇರಿಸುಮುರಿಸು ಉಂಟು ಮಾಡಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗಣೇಶ್‌ ಅವರು ನನಗೆ ಮತ್ತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕು ಅನಿಸಿದೆ. ನಾನು ಮಾತ್ರ ಅಲ್ಲ 40 ರಿಂದ 50 ಶಾಸಕರಿಗೆ ಈ ಆಸೆಯಿದೆ ಎಂದು ಹೇಳಿದ್ದಾರೆ.
ಡಿಸೆಂಬರ್‌ 22 ರಂದು ಸಂಪುಟ ವಿಸ್ತರಣೆ ಆಗುವುದಿಲ್ಲ. ಹಲವು ಜನರಿಗೆ ಅಸಮಾಧಾನ ಇದೆ, ಹೀಗಾಗಿ ಲೋಕಸಭಾ ಚುನಾವಣೆ ವರೆಗೆ ಸಂಪುಟ ವಿಸ್ತರಣೆ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಂದುವರಿಯುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.