ಬೆಳಗಾವಿ ಅಧಿವೇಶನಕ್ಕೆ ಸಿದ್ದರಾಮಯ್ಯ ಗೈರು ಹಾಜರು ಸಾಧ್ಯತೆ?
ಮೈತ್ರಿ ಸರ್ಕಾರದ ಪಾಲಿಗೆ ಅಗ್ನಿ ಪರೀಕ್ಷೆ ಎಂದೇ ಹೇಳಲಾಗುತ್ತಿರುವ ಬೆಳಗಾವಿ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ...

Published On :
ಬೆಂಗಳೂರು: ಮೈತ್ರಿ ಸರ್ಕಾರದ ಪಾಲಿಗೆ ಅಗ್ನಿ ಪರೀಕ್ಷೆ ಎಂದೇ ಹೇಳಲಾಗುತ್ತಿರುವ ಬೆಳಗಾವಿ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿದೇಶಕ್ಕೆ ಹಾರಲು ಸಿದ್ಧರಾಗಿದ್ದಾರೆಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದಲ್ಲಿ ರೂ.35 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಸಿಎಜಿ ವರದಿ ಉಲ್ಲೇಖಿಸಿ ಬಿಜೆಪಿ ಗಂಭೀರ ಆರೋಪ ಮಾಡಿದೆ. ಅಲ್ಲದೆ, ಸದನದಲ್ಲೂ ಸಿಎಜಿ ವರದಿ ಪ್ರಸ್ತಾಪಿಸಿ ಸೂಕ್ತ ತನಿಖೆಗೆ ಆಗ್ರಹಿಸುವುದಾಗಿ ಎಚ್ಚರಿಗೆ ನೀಡಿದೆ.
ಈ ಹಿನ್ನಲೆಯಲ್ಲಿ ಅಧಿವೇಶನದ ಮೊದಲ ವಾರ ಗೈರು ಹಾಜರಾಗುವ ಸಿದ್ದರಾಮಯ್ಯ ಅವರು ಮಲೇಷ್ಯಾಗೆ ತೆರಳುತ್ತಿದ್ದಾರೆಂದು ಹೇಳಲಾಗುತ್ತಿದೆ.
ಬಿಜೆಪಿಯ ಆರೋಪದಿಂದ ಉಂಟಾಗುವ ಮುಜುಗರ ತಪ್ಪಿಸಿಕೊಳ್ಳುವುದಕ್ಕಾಗಿಯೇ ಸಿದ್ದರಾಮಯ್ಯ ಅವರು ಈ ನಡೆ ಅನುಸರಿಸುತ್ತಿದ್ದಾರೆಂಬ ಆರೋಪಗಳು ಕೇಳಿ ಬರತೊಡಗಿವೆ.
ಬೆಳಗಾವಿ ಅಧಿವೇಶನ ಡಿ.10 ರಿಂದ 21ರವರೆಗೆ ನಡೆಯಲಿದ್ದು, ಆರಂಭದಲ್ಲಿಯೇ ಕಬ್ಬು ಬೆಳೆಗಾರರ ಬಾಕಿ, ಸಾಲ ಮನ್ನಾ, ಸರ್ಕಾರದ ಆರ್ಥಿಕ ದುಸ್ಥಿತಿ, ಬರ ನಿರ್ವಹಣೆ, ಉತ್ತರ ಕರ್ನಾಟಕ ನಿರ್ಲಕ್ಷ್ಯದ ವಿಷಯ ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಸಜ್ಜಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


