ಬಿ.ಎಸ್.ಯಡಿಯೂರಪ್ಪ ಬಾಲಿಶ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲ್ಲ: ಸಿಎಂ ಕುಮಾರಸ್ವಾಮಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೀಡುವ ಬಾಲಿಶ ಹೇಳಿಕೆಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಹೇಳಿದ್ದಾರೆ...

Published On :
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೀಡುವ ಬಾಲಿಶ ಹೇಳಿಕೆಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಹೇಳಿದ್ದಾರೆ.
ವಿಧಾನಮಂಡಲ ಚಳಿಗಾನ ಅಧಿವೇಶನ ಹಿನ್ನಲೆಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕುಮಾರಸ್ವಾಮಿಯವರು ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿ ವಿರುದ್ಧ ಕಿಡಿಕಾರಿದರು.
ಕುಮಾರಸ್ವಾಮಿಯವನರು ಶೋಕಿವಾಲ. ಭತ್ತ ಕೊಯ್ಲು ಮಾಡಿದ್ದು ಶೋಗಾಗಿ ಎಂಬ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ ಅವರ ಪ್ರಮಾಣಪತ್ರ ನನಗೆ ಬೇಕಿಲ್ಲ. ಜನರೇ ಈ ಬಗ್ಗೆ ನಿರ್ಧರಿಸುತ್ತಾರೆ. ರಾಜ್ಯದ ಹಿತಕ್ಕೆ ಸಂಬಂಧಿಸಿದ ವಿಷಯಗಳಿದ್ದರೆ ಮಾತ್ರ ಯಡಿಯೂರಪ್ಪ ಅವರ ಮಾತುಗಳಿಗೆ ಪ್ರತಿಕ್ರಿಯೆ ನೀಡುತ್ತೇನೆಂದು ಹೇಳಿದ್ದಾರೆ.
ಅಧಿವೇಶನ ಸುಗಮವಾಗಿ ನಡೆಯಬೇಕೆಂಬುದು ನಮ್ಮ ಆಶಯ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಬಿಜೆಪಿ ನಾಯಕರು ಉತ್ತಮ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿ. ಪ್ರತಿಭಟನೆ ನಡೆಸುವ ಹಕ್ಕು ಬಿಜೆಪಿಯವರಿಗೆ ಸಂಪೂರ್ಣವಾಗಿದ್ದು, ಅವರು ಪ್ರತಿಭಟನೆ ಮಾಡಲಿ ಎಂದು ತಿಳಿಸಿದ್ದಾರೆ.
ಸಿಎಂ ಸ್ವಾಗತಕ್ಕೆ ರಮೇಶ್ ಜಾರಕಿಹೊಳಿ ಗೈರು
ಬೆಳಗಾವಿ ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿಯವರು ಗೈರು ಹಾಜರಾಗಿರುವುದು ಇದೇ ವೇಳೆ ಎದ್ದು ಕಾಣುತ್ತಿತ್ತು.
ರಮೇಶ್ ಅವರ ಗೈರು ಹಾಜರಾತಿ ನಡುವೆಯೇ ಚಳಿಗಾಲ ಅಧಿವೇಶನಕ್ಕಾಗಿ ಸುವರ್ಣ ಸೌಧಕ್ಕೆ ಆಗಮಿಸಿದ ಕುಮಾರಸ್ವಾಮಿಯವರಿಗೆ ಸ್ವಾಗತ ಕೋರಲಾಯಿತು. ಸಾಲಮನ್ನಾ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಯ ರೈತರು ಮುಖ್ಯಮಂತ್ರಿಗಳಿಗೆ ಮಾಲಾರ್ಪಣೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Kumaraswamyಕುಮಾರಸ್ವಾಮಿbjpಬಿಜೆಪಿWinter SessionKarnatakaಕರ್ನಾಟಕBelagaviಬೆಳಗಾವಿYeddyurappaಯಡಿಯೂರಪ್ಪಚಳಿಗಾಲ ಅಧಿವೇಶನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


