ಕಾಂಗ್ರೆಸ್ ಗೆಲುವು: ಸೋನಿಯಾ, ರಾಹುಲ್ ಪ್ರಯತ್ನಕ್ಕೆ ಸಿಕ್ಕ ಫಲ ಎಂದ ಸಿಎಂ ಕುಮಾರಸ್ವಾಮಿ
ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಈ ಫಲಿತಾಂಶ ಮುಂಬರುವ ಲೋಕಸಭಾ....

Published On :
ಬೆಳಗಾವಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಈ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ತೆಲಂಗಾಣ ಹಾಗೂ ಮಿಜೋರಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪತ್ರಿಕಾ ಪ್ರಕಟಣೆ ನೀಡಿರುವ ಸಿಎಂ, ಜಾತ್ಯತೀತ ಪಕ್ಷಗಳತ್ತ ರಾಷ್ಟ್ರ ಸಾಗುತ್ತಿದೆ ಎಂಬುದಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಮತದಾರ ನೀಡಿರುವ ತೀರ್ಪು ಸಾಕ್ಷಿಯಾಗಿದೆ ಎಂದಿದ್ದಾರೆ.
ದೇಶಾದ್ಯಂತ ಏಕಪಕ್ಷೀಯ ಆಡಳಿತದ ನಿರೀಕ್ಷೆ ಇಟ್ಟುಕೊಂಡು ಪ್ರತಿಪಕ್ಷಗಳನ್ನು ದಮನ ಮಾಡಲು ಮುಂದಾಗಿದ್ದವರಿಗೆ ಇದೀಗ ಮುಖಭಂಗವಾಗಿದೆ ಎಂದು ಸಿಎಂ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಐದು ರಾಜ್ಯಗಳ ಫಲಿತಾಂಶ ಜಾತ್ಯತೀತ ಪಕ್ಷಗಳೆಲ್ಲವೂ ಜತೆಯಾಗಿ ಚುನಾವಣೆ ಎದುರಿಸಲು ವೇದಿಕೆಯನ್ನು ದೊರಕಿಸಿಕೊಟ್ಟಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಯತ್ನಕ್ಕೆ ಸಿಕ್ಕ ಫಲ ಇದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD Kumaraswamyಎಚ್ ಡಿ ಕುಮಾರಸ್ವಾಮಿಚುನಾವಣಾ ಫಲಿತಾಂಶPoll Results2019ರ ಲೋಕಸಭೆ ಚುನಾವಣೆ2019 Lok Sabha elections
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


