ಕೊನೆಗೂ ಅಂಬರೀಷ್ ಗೆ ಸಂತಾಪ ಸೂಚಿಸಿದ ಲೋಕಸಭೆ
ಇತ್ತೀಚಿಗಷ್ಟೇ ನಿಧನರಾದ ಮಾಜಿ ಕೇಂದ್ರ, ರಾಜ್ಯ ಸಚಿವ ಹಾಗೂ ಹಿರಿಯ ಅಂಬರೀಷ್ ಅವರಿಗೆ ಗುರುವಾರ ಲೋಕಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

Published On :
ನವದೆಹಲಿ: ಇತ್ತೀಚಿಗಷ್ಟೇ ನಿಧನರಾದ ಮಾಜಿ ಕೇಂದ್ರ, ರಾಜ್ಯ ಸಚಿವ ಹಾಗೂ ಹಿರಿಯ ಅಂಬರೀಷ್ ಅವರಿಗೆ ಗುರುವಾರ ಲೋಕಸಭೆಯಲ್ಲಿ ಸಂತಾಪ ಸೂಚಿಸಲಾಯಿತು.
ಕಳೆದ ಮಂಗಳವಾರದಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ಎನ್.ಡಿ ತಿವಾರಿ, ಮದನ್ ಲಾಲ್ ಕುರಾನಾ, ಸಿ.ಕೆ. ಜಾಫರ್ ಷರೀಫ್, ಗುರುದಾಸ್ ಕಾಮತ್ ಮುಂತಾದವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಆದರೆ, ಮಾಜಿ ಸಂಸದರೂ, ಮಾಜಿ ಕೇಂದ್ರ ಸಚಿವರೂ ಆಗಿದ್ದ ಅಂಬರೀಷ್ ಅವರ ಹೆಸರು ಈ ಪಟ್ಟಿಯಲ್ಲಿ ಇಲ್ಲದೇ ಇರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಈ ವಿಚಾರವನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಗಮನಕ್ಕೆ ತಂದಿದ್ದರು. ಬಳಿಕ ಎಚ್ಚೆತ್ತುಕೊಂಡಿದ್ದ ಸ್ಪೀಕರ್ ಸುಮಿತ್ರಾ ಮಹಾಜನ್, ಬುಧವಾರ ಸಂತಾಪ ಸೂಚಿಸುವುದಾಗಿ ಹೇಳಿದ್ದರು. ಆದರೆ, ಬುಧವಾರವೂ ಅಂಬರೀಷ್ ಅವರಿಗೆ ಸಂತಾಪ ಸೂಚಿಸಲಿಲ್ಲ.
ಮೂರನೆ ದಿನವಾದ ಇಂದು ಕಲಾಪ ಆರಂಭವಾಗುತ್ತಿದ್ದಂತೆ ಸುಮಿತ್ರ ಮಹಾಜನ್ ಅವರು ನವೆಂಬರ್ 24ರಂದು ನಿಧನರಾದ ಅಂಬರೀಷ್ ಅವರಿಗೆ ಸಂತಾಪ ಸೂಚಿಸಿ, ರಾಜಕೀಯ ಕ್ಷೇತ್ರಕ್ಕೆ ಅವರು ನೀಡಿದ ಸೇವೆಯನ್ನು ಸ್ಮರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


