ರಾಜಕೀಯ

ನಿರೀಕ್ಷಿತ ಸಮಯಕ್ಕಿಂತ ಮುಂಚೆಯೇ ಸಚಿವನಾಗುವ ಅವಕಾಶ: ಸತೀಶ್ ಜಾರಕಿಹೊಳಿ

ಇಂದು ಸಂಜೆ ನಡೆಯುತ್ತಿರುವ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಜಿಲ್ಲೆಯ ಯಮನಕರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ...

ನಿರೀಕ್ಷಿತ ಸಮಯಕ್ಕಿಂತ ಮುಂಚೆಯೇ ಸಚಿವನಾಗುವ ಅವಕಾಶ: ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ
Published On :
ಬೆಳಗಾವಿ: ಇಂದು ಸಂಜೆ ನಡೆಯುತ್ತಿರುವ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಜಿಲ್ಲೆಯ ಯಮನಕರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ದೊರಕಿದೆ. 
ಸರ್ಕಾರ ರಚನೆ ವೇಳೆ ಪಕ್ಷದ ಹೈಕಮಾಂಡ್ ಸ್ವಲ್ಪ ದಿನ ಕಾಯಬೇಕಾಗಿ ಹೇಳಿತ್ತು, ಆದರೆ ಇಷ್ಟು ಬೇಗ ಅವಕಾಶ ಒದಗಿ ಬರುತ್ತದೆ ಎಂದು ತಿಳಿದಿರಲಿಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಇನ್ನೂ ತಮ್ಮ ಸಹೋದರ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಟ್ಟಿರುವುದು ಪಕ್ಷಕ್ಕೆ ಯಾವುದೇ ರೀತಿಯ ಮೇಲೆ ಪರಿಣಾಮ ಬೀರುವುದಿಲ್ಲ, ಅವರು ಪಕ್ಷದಲ್ಲೇ ಇರುತ್ತಾರೆ ಎಂದು ಸತೀಶ್ ತಿಳಿಸಿದ್ದಾರೆ.
ಸಂಪುಟದಿಂದ ಕೈಬಿಟ್ಟಿರುವುದನ್ನು ಅವಮಾನ ಎಂದು ತಿಳಿದುಕೊಂಡಿಲ್ಲ, ಸ್ವಾತಂತ್ರ್ಯಾ ನಂತರದಿಂದ ಕಾಂಗ್ರೆಸ್ ನಲ್ಲಿ ಈ ಅಭ್ಯಾಸ ನಡೆದುಕೊಂಡಿದೆ ಬಂದಿದೆ, ಇವಾಗ ಸಂಪುಟದಿಂದ ಹೊರ ಬಂದಿರುವವರನ್ನು ಮತ್ತೆ ಸಂಪುಟಕ್ಕೆ ಸೇರುವ ಸಾದ್ಯತೆಯಿದೆ ಎಂದು ಹೇಳಿದ್ದಾರೆ.
ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ, ರಮೇಶ್ ಜಾರಕಿಹೊಳಿಯಿಂದ ಪಕ್ಷಕ್ಕೆ ಯಾವುದೇ ಹಾನಿಯಾಗುವುದಿಲ್ಲ, ಅವರು ಕಾಂಗ್ರೆಸ್ ನಲ್ಲೇ ಇರುತ್ತಾರೆ, ಎಂದು ಹೇಳಿದ ಅವರು, ಯಾವುದೇ ಖಾತೆ ಕೊಟ್ಟರೂ ನಿರ್ವಹಿಸಿಕೊಂಡು ಹೋಗುವುದಾಗಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.