ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದಕ್ಕೆ ಖುಷಿಯಾಗಿದೆ: ಎಚ್.ಕೆ.ಪಾಟೀಲ್
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಪ್ರಚಾರ ಸಮಿತಿ ಅಧ್ಯಕ್ಷರಾಗಿದಕ್ಕೆ ಖುಷಿಯಾಗಿದೆ ಎಂದು ಹಿರಿಯ....

Published On :
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಪ್ರಚಾರ ಸಮಿತಿ ಅಧ್ಯಕ್ಷರಾಗಿದಕ್ಕೆ ಖುಷಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರು ಶನಿವಾರ ಹೇಳಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಎಚ್. ಕೆ. ಪಾಟೀಲ್ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು ಆದೇಶ ಹೊರಡಿಸಿದ್ದಾರೆ.
ಸಚಿವ ಸ್ಥಾನ ವಂಚಿತರ ಬಂಡಾಯ ಶಮನ ಮಾಡಲು ಪ್ರಯತ್ನಿಸುತ್ತಿರುವ ಹೈಕಮಾಂಡ್, ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ್ದ ಪ್ರಚಾರ ಸಮಿತಿ ಅಧ್ಯಕ್ಷ ಪಟ್ಟವನ್ನು ಎಚ್.ಕೆ.ಪಾಟೀಲ್ ಅವರಿಗೆ ನೀಡಿ ಮನವೊಲಿಸಿದೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಎಚ್.ಕೆ.ಪಾಟೀಲ್ ಅವರು, ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದು ಖುಷಿ ತಂದಿದೆ. ಇದು ಸಚಿವ ಸ್ಥಾನಕ್ಕಿಂತಲೂ ದೊಡ್ಡ ಹುದ್ದೆ. ಇದೊಂದು ಮಹತ್ವದ ಮತ್ತು ಸವಾಲಿನ ಜಾವಾಬ್ದಾರಿ ಎಂದು ಹೇಳಿದ್ದಾರೆ. ಅಲ್ಲದೆ ತಮ್ನನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ ರಾಹುಲ್ ಗಾಂಧಿ ಹಾಗೂ ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಇಬ್ಬರಿಗೂ ಧನ್ಯವಾದ ಹೇಳಿದ್ದಾರೆ.
ಎಚ್.ಕೆ. ಪಾಟೀಲ್ ಅವರು ಸಚಿವ ಸ್ಥಾನ ಕೈತಪ್ಪಿತೆಂದು ಬಾರೀ ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ಅವರನ್ನು ಸಮಾಧಾನಪಡಿಸಲೆಂದೇ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


