ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಮನುಷ್ಯ, ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ
ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಮನುಷ್ಯ, ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಹೇಳಿದ್ದಾರೆ.

Published On :
ಬಾಗಲಕೋಟೆ: ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಮನುಷ್ಯ, ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಹೇಳಿದ್ದಾರೆ.
ಜಮಖಂಡಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, 'ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬುದೆಲ್ಲ ವದಂತಿ. ಅವರಿಗೆ ಯಾವ ಅಸಮಾಧಾನ, ಅತೃಪ್ತಿಯೂ ಇಲ್ಲ. ಅವರನ್ನು ತೆಗೆದು ಅವರ ಮನೆಯಲ್ಲೇ ಸಚಿವ ಸ್ಥಾನ ಕೊಟ್ಟಿದ್ದೇವೆ. ಹೀಗಾಗಿ ಇಲ್ಲಿ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ.
ಇನ್ನು ರಮೇಶ್ ಜಾರಕಿಹೊಳಿ ನನ್ನ ಒಳ್ಳೇಯ ಸ್ನೇಹಿತ. ಅವರ ರಾಜೀನಾಮೆ ವೀಡಿಯೋ ವೈರಲ್ ಆಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಮನುಷ್ಯ. ಅವರು ಎಲ್ಲಿಯೂ ಹೋಗಲ್ಲ. ಒಂದೆರಡು ದಿನ ಈ ರೀತಿಯ ವದಂತಿಗಳು ಇರುತ್ತದೆ. ಅವರಿಗೆ ಯಾವುದೇ ಅಸಮಾಧಾನವೂ ಇಲ್ಲ. ಅತೃಪ್ತಿಯೂ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್PoliticsರಾಜಕೀಯSiddaramaiahಸಿದ್ದರಾಮಯ್ಯKarnatakaಕರ್ನಾಟಕಸಂಪುಟ ವಿಸ್ತರಣೆಬಾಗಲಕೋಟೆRamesh jarakiholiರಮೇಶ್ ಜಾರಕಿಹೊಳಿBagalkoteCabinet Re Shuffle
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


