ರಮೇಶ್ ಜಾರಕಿಹೊಳಿ ಬಿಗ್ ಹಾರ್ಟ್ ಹೊಂದಿರುವ ಗುಡ್ ಬಾಯ್: ಡಿಕೆ ಶಿವಕುಮಾರ್
ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಬೆದರಿಕೆ ಒಡ್ಡಿರುವ ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ನಿರ್ಧಾರಕ್ಕೆ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

Published On :
ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಬೆದರಿಕೆ ಒಡ್ಡಿರುವ ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ನಿರ್ಧಾರಕ್ಕೆ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ರಮೇಶ್ ಜಾರಕಿಹೊಳಿ ವಿಶಾಲ ಹೃದಯದ ಉತ್ತಮ ಹುಡುಗ ಎಂದು ತಮ್ಮ ಶೈಲಿಯಲ್ಲಿ ಹೇಳುವ ಮೂಲಕ ಜಾರಕಿಹೊಳಿ ಕಾಲೆಳೆದಿದ್ದಾರೆ.
ರಮೇಶ್ ಬಿಗ್ ಹಾರ್ಟ್ ಹೊಂದಿರುವ ಗುಡ್ ಬಾಯ್ ಆತನ ಜೊತೆ ನಾನು ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಜಾರಕಿಹೊಳಿ ಮತ್ತು ಸಚಿವ ಡಿ.ಕೆ ಶಿವಕುಮಾರ್ ನಡುವೆ ಅಸಮಾಧಾನವಿದ್ದು, ಡಿಕೆಶಿ ವಿರುದ್ಧ ರಮೇಶ್ ಪಕ್ಷದ ನಾಯಕರಿಗೆ ದೂರು ನೀಡಿದ್ದರು,
ಬೆಳಗಾವಿ ರಾಜಕೀಯದಲ್ಲಿ ಡಿಕೆಶಿ ತಲೆ ಹಾಕಬಾರದೆಂದು ಹೈಕಮಾಂಡ್ ಬಳಿ ದೂರು ನೀಡಿದ್ದರು, ಪಕ್ಷದ ಒಳಿತಿಗಾಗಿ ಕೆಲವು ನಾಯಕರು ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ ಎಂದು ಡಿಕೆಶಿ ಟಾಂಗ್ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Resignರಾಜಿನಾಮೆಡಿಕೆ ಶಿವಕುಮಾರ್D.K Shiva kumarರಮೇಶ್ ಜಾರಕಿಹೊಳಿRamesh JarkiholiBig Heartದೊಡ್ಡ ಹೃದಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


