ರಾಜಿನಾಮೆ ನಿರ್ಧಾರ ಬದಲಿಸುವಂತೆ ಜಾರಕಿಹೊಳಿಗೆ ದುಂಬಾಲು; ಬಂಡಾಯದಿಂದ ಕಾಂಗ್ರೆಸ್ ಕಂಗಾಲು
ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿರುವ ರಮೇಶ್ ಜಾರಕಿಹೊಳಿ, ಆತುರದ ನಿರ್ಧಾರ ಕೈಗೊಳ್ಳದಂತೆ ರಮೇಶ್ ಜಾರಕಿಹೊಳಿ ಮನವೊಲಿಸಲು ಪಕ್ಷದ ಹಿರಿಯ ...

Published On :
ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿರುವ ರಮೇಶ್ ಜಾರಕಿಹೊಳಿ, ಆತುರದ ನಿರ್ಧಾರ ಕೈಗೊಳ್ಳದಂತೆ ರಮೇಶ್ ಜಾರಕಿಹೊಳಿ ಮನವೊಲಿಸಲು ಪಕ್ಷದ ಹಿರಿಯ ನಾಯಕರು ಯತ್ನಿಸುತ್ತಿದ್ದಾರೆ.
ಅಸಮಾಧಾನಗೊಂಡ ನಾಯಕರನ್ನು ಮನವೊಲಿಸಲು ಸೋಮವಾರ ರಾಜ್ಯ ಕಾಂಗ್ರೆಸ್ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ. ಇಂದಿ ರಮೇಶ್ ಜಾರಕಿಹೊಳಿ ಎಲ್ಲಾ ಬಂಡಾಯ ಶಾಸಕರ ಜೊತೆ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ, ಸಭೆಯಲ್ಲಿ ಎಲ್ಲಾ ಅತೃಪ್ತರು ಸಾಮೂಹಿಕ ರಾಜೀನಾಮೆ ನೀಡುವ ಸಂಬಂಧ ಚರ್ಚಿಸಲಿದ್ದು ರಮೇಶ್ ಜಾರಕಿಹೊಳಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದಾರೆ,
ಕಾಂಗ್ರೆಸ್ ಅತೃಪ್ತ ಶಾಸಕರಿಗೆ ಹಲವು ಅಫರ್ ಗಳನ್ನು ಬಿಜೆಪಿ ನೀಡುತ್ತಿದೆ,. ಕಳೆದ ಮೂರು ತಿಂಗಳಿಂದ ಕೆಲವು ಶಾಸಕರು ಬಿಜೆಪಿ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಪಕ್ಷಕ್ಕೆ ರಾಜಿನಾಮೆ ನೀಡುವ ಸಂಬಂಧ ಮಾತುಕತೆ ನಡೆಸಿದ್ದಾರೆ, ಬಂಡಾಯ ಶಾಸಕರು ಗುಂಪು ಇಂದು ನಿರ್ಣಾಯದವಾದ ನಿರ್ಧಾರ ಕೈಗೊಳ್ಳಲಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.
ರಮೇಶ್ ಜಾರಕಿಹೊಳಿ ಅವರನ್ನು ಹೊರತು ಪಡಿಸಿ ಹಲವು ಬಂಡಾಯ ಶಾಸಕರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದು, ಅವರೆಲ್ಲಾ ರಾಜೀನಾಮೆ ನೀಡದಿರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ಪಡೆಯಲು ಜಾರಕಿಹೊಳಿ ಸೇರಿದಂತೆ ಹಲವು ಬಂಡಾಯ ಶಾಸಕರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು, ಆದರೆ ಯಾರೋಬ್ಬರು ಫೋನ್ ಕರೆ ಸ್ವೀಕರಿಸಲಿಲ್ಲ,.
ತಮಗೆ ಸ್ಥಾನ ನೀಡಲು ಹೈಕಮಾಂಡ್ ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು ಬೇಸರಗೊಂಡಿದ್ದಾರೆ, ಅವರು ರಾಜಿನಾಮೆ ನೀಡದಂತೆ ತಡೆಯಲು ಅನೇಕ ಪ್ರಯತ್ನಗಳು ನಡೆಯುತ್ತಿವೆ, ಸೊಮವಾರ ಬೆಳಗ್ಗೆ ವರೆಗೂ ಹಲವು ಹಿರಿಯ ಕಾಂಗ್ರೆಸ್ ನಾಯಕರು ಬಂಡಾಯ ಶಾಸಕರ ಜೊತೆ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


