ರಾಜಕೀಯ

24 ಗಂಟೆಯಲ್ಲಿ ಮೈತ್ರಿ ಸರ್ಕಾರ ಪತನ: ಬಿಜೆಪಿ ಶಾಸಕ ಉಮೇಶ್ ಕತ್ತಿ

ಮೈತ್ರಿ ಸರ್ಕಾರಕ್ಕೆ ಕಂಟಕವಾಗಿದ್ದ ಸಂಪುಟ ಪುನಾರಚನೆ ನಂತರ ತಣ್ಣಗಾಗಬೇಕಿದ್ದ ಅತೃಪ್ತರ ಶಮನ ಇದೀಗ ಇನ್ನು ಜಾಸ್ತಿಯಾಗಿದ್ದು ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ.

24 ಗಂಟೆಯಲ್ಲಿ ಮೈತ್ರಿ ಸರ್ಕಾರ ಪತನ: ಬಿಜೆಪಿ ಶಾಸಕ ಉಮೇಶ್ ಕತ್ತಿ
ಉಮೇಶ್ ಕತ್ತಿ
Published On :
ಬೆಳಗಾವಿ: ಮೈತ್ರಿ ಸರ್ಕಾರಕ್ಕೆ ಕಂಟಕವಾಗಿದ್ದ ಸಂಪುಟ ಪುನಾರಚನೆ ನಂತರ ತಣ್ಣಗಾಗಬೇಕಿದ್ದ ಅತೃಪ್ತರ ಶಮನ ಇದೀಗ ಇನ್ನು ಜಾಸ್ತಿಯಾಗಿದ್ದು ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇನ್ನೊಂದೆಡೆ 15 ಶಾಸಕರು ನಮ್ಮ ಸಂಪರ್ಕದಲ್ಲಿದ್ದು 24 ಗಂಟೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬಿದ್ದು ಹೋಗುತ್ತದೆ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿದ್ದು ಇದೀಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. 
ಬಿಜೆಪಿ ಮುಖಂಡರ ಸಭೆಯಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಉಮೇಶ್ ಕತ್ತಿ ಅವರು ಮೈತ್ರಿ ಸರ್ಕಾರದ 15 ಶಾಸಕರು ನಮ್ಮ ಸಂಪರ್ಕದಲ್ಲಿದ್ದು ಈಗಲೇ ಅದನ್ನು ಬಹಿರಂಗಪಡಿಸುವುದಿಲ್ಲ. ಇನ್ನು 24 ಗಂಟೆಯಲ್ಲಿ ಮೈತ್ರಿ ಸರ್ಕಾರ ಪತನಗೊಳ್ಳಲಿದೆ. ಬಳಿಕ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಾತು ಉಳಿಸಿಕೊಳ್ಳದಿದ್ದರೆ ರಾಜಿನಾಮೆ ಕೊಡ್ತಾರಾ?: ದಿನೇಶ್ ಗುಂಡುರಾವ್
24 ಗಂಟೆಯೊಳಗೆ ಮೈತ್ರಿ ಸರ್ಕಾರ ಬೀಳುತ್ತದೆ ಎಂದು ಹೇಳುತ್ತಿರುವ ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರು ಮಾತು ಉಳಿಸಿಕೊಳ್ಳದಿದ್ದರೆ ರಾಜಿನಾಮೆ ಕೊಡ್ತಾರಾ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸವಾಲು ಹಾಕಿದ್ದಾರೆ.
ಹಿರಿಯ ಶಾಸಕರು ಹೀಗೆ ಹುಚ್ಚು ಹುಚ್ಚಾಗಿ ಮಾತನಾಡಬಾರದು. ತಮ್ಮ ಮಾತು ಉಳಿಸಿಕೊಳ್ಳದ್ದಿದ್ದರೆ ಮೊದಲು ಉಮೇಶ್ ಕತ್ತಿ ರಾಜಿನಾಮೆ ಕೊಡಲಿ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.