ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ ತ್ಯಜಿಸಲು ಎಚ್.ವಿಶ್ವನಾಥ್ ನಿರ್ಧಾರ?
ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಯಲು ಎಚ್,ವಿಶ್ವನಾಥ್ ನಿರ್ಧರಿಸಿದ್ದಾರೆ ಎನ್ನಲಾಗಿದೆ, ಪಕ್ಷದಲ್ಲಿ ...

Published On :
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಯಲು ಎಚ್.ವಿಶ್ವನಾಥ್ ನಿರ್ಧರಿಸಿದ್ದಾರೆ ಎನ್ನಲಾಗಿದೆ, ಪಕ್ಷದಲ್ಲಿ ತಮ್ಮ ನಿರ್ಧಾರಗಳಿಗೆ ಬೆಲೆಯಿಲ್ಲ, ತಮ್ಮನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂಬ ಅಸಮಾಧಾನದಿಂದ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಕೆಲ ಟಿವಿ ಮಾಧ್ಯಮಗಳು ವರದಿ ಮಾಡಿವೆ.
ತಮ್ಮ ಯಾವುದೇ ನಿರ್ಧಾರಗಳಿಗೆ ದೇವೇಗೌಡ ಮತ್ತು ಕುಮಾರಸ್ವಾಮಿ ಬೆಲೆ ಕೊಡುತ್ತಿಲ್ಲ, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಎಲ್ಲಾ ನಿರ್ಧಾರಗಳನ್ನು ಅವರೇ ತೆಗೆದುಕೊಳ್ಳುತ್ತಿದ್ದಾರೆ ಎಂದು ವಿಶ್ವನಾಥ್ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಲೋಕಸಭಾ ಚುನಾವಣೆ ತಯಾರಿ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಜನವರಿ 3 ರಂದು ಪಕ್ಷದ ಕಚೇರಿಯಲ್ಲಿ ಕರೆದಿರುವ ಶಾಸಕರು, ಸಂಸದರು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಸೇರಿದಂತೆ ಪಕ್ಷದ ಪ್ರಮುಖ ಸಭೆ ಬಳಿಕ ದೇವೇಗೌಡರನ್ನು ಭೇಟಿಯಾಗಿ ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಬಿಡುಗಡೆ ಮಾಡಬೇಕೆಂದು ಮನವಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.
ದೇವೇಗೌಡರ ನಿರೀಕ್ಷೆಗೆ ತಕ್ಕಂತೆ ಹುದ್ದೆಗೆ ನ್ಯಾಯ ಕೊಡಲು ಆಗುತ್ತಿಲ್ಲ. ನನ್ನನ್ನು ಗೆಲ್ಲಿಸಿದ ಹುಣಸೂರು ಮತದಾರರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಲು ಆಗುತ್ತಿಲ್ಲ. ಹೀಗಾಗಿ ಏಕ ಕಾಲದಲ್ಲಿ ಪಕ್ಷದ ಹುದ್ದೆ ಹಾಗೂ ಕ್ಷೇತ್ರದ ಕಡೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಎಲ್ಲಕ್ಕಿಂತ ಮಿಗಿಲಾಗಿ ನನ್ನ ಆರೋಗ್ಯ ಸಹಕರಿಸುತ್ತಿಲ್ಲ. ಜತೆಗೆ ವೈದ್ಯರು ಸಹ ವಿಶ್ರಾಂತಿಗೆ ಸಲಹೆ ನೀಡಿರುವುದರಿಂದ ರಾಜ್ಯಾಧ್ಯಕ್ಷ ಹುದ್ದೆ ತ್ಯಜಿಸಲು ಮುಂದಾಗಿದ್ದೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


