ಯಾರ ಕೈಗೂ ಸಿಗದ ರಮೇಶ್ ಜಾರಕಿಹೊಳಿ ಮುಂಬೈಯಲ್ಲಿ ಏನು ಮಾಡ್ತಾ ಇದ್ದಾರೆ?
ಸಂಪುಟ ವಿಸ್ತರಣೆ ನಂತರ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗುವ ಮೂಲಕ ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯದ ಭೀತಿ ಸೃಷ್ಟಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಲ್ಲಿದ್ದಾರೆ ಎಂಬ ಸಣ್ಣ ಸುಳಿವು ಸಿಗುತ್ತಿಲ್ಲ.

Published On :
ಬೆಳಗಾವಿ : ಸಂಪುಟ ವಿಸ್ತರಣೆ ನಂತರ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗುವ ಮೂಲಕ ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯದ ಭೀತಿ ಸೃಷ್ಟಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಲ್ಲಿದ್ದಾರೆ ಎಂಬ ಸಣ್ಣ ಸುಳಿವು ಸಿಗುತ್ತಿಲ್ಲ.
ಮಂಗಳವಾರ ಮಧ್ಯಾಹ್ನ ಬೆಂಗಳೂರಿನಿಂದ ಬೆಳಗಾವಿಗೆ ಬಂದ ನಂತರ ಅವರ ಸೆಲ್ ಪೋನ್ ಸ್ವೀಚ್ ಆಫ್ ಆಗಿದೆ. ಅಂದಿನಿಂದಲೂ ಅವರು ಏಲ್ಲಿದ್ದಾರೆ ಎಂಬುದು ಗೋಕಾಕ್ ನಲ್ಲಿನ ಅವರ ಸ್ನೇಹಿತರಿಗೂ ಗೊತ್ತಿಲ್ಲ.
ಈವರೆಗೂ ಪತ್ತೆಯಾಗದ ರಮೇಶ್ ಜಾರಕಿಹೊಳಿ ಬಗ್ಗೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೂ ಮಾಹಿತಿ ಇಲ್ಲ. ಸಹೋದರ ಸತೀಶ್ ಜಾರಕಿಹೊಳಿಗೂ ಯಾವುದೇ ಮಾಹಿತಿ ತಿಳಿದಿಲ್ಲ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದರೂ ಸತೀಶ್ ಜಾರಕಿಹೊಳಿ ಮಾತ್ರ ಅವರು ಪಕ್ಷ ಬಿಡುವುದಿಲ್ಲ, ಕಾಂಗ್ರೆಸ್ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bengalurubjpಬಿಜೆಪಿಸತೀಶ್ ಜಾರಕಿಹೊಳಿPoliticsರಾಜಕೀಯSiddaramaiahಸಿದ್ದರಾಮಯ್ಯRamesh jarakiholiರಮೇಶ್ ಜಾರಕಿಹೊಳಿSathish Jarakiholi ಬೆಂಗಳೂರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


