ರಾಜಕೀಯ

ರೈತರ ಸಾಲಮನ್ನಾ ಯೋಜನೆ ಕುರಿತು ಪ್ರಧಾನಿ ಮೋದಿ ಹೇಳಿಕೆ ದುರದೃಷ್ಟಕರ: ಸಿಎಂ ಕುಮಾರಸ್ವಾಮಿ

ರಾಜ್ಯದ ರೈತರ ಸಾಲಮನ್ನಾ ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆ ಸರಿ ಇಲ್ಲ...

ರೈತರ ಸಾಲಮನ್ನಾ ಯೋಜನೆ ಕುರಿತು ಪ್ರಧಾನಿ ಮೋದಿ ಹೇಳಿಕೆ ದುರದೃಷ್ಟಕರ: ಸಿಎಂ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Published On :
ಬೆಂಗಳೂರು: ರಾಜ್ಯದ ರೈತರ ಸಾಲಮನ್ನಾ ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಹೇಳಿಕೆ ಸರಿ ಇಲ್ಲ. ಅದು ಸೂಕ್ಷ್ಮವಲ್ಲದ ಮತ್ತು ದುರದೃಷ್ಟಕರ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಇಂದು ಟ್ವೀಟ್‌ ಮಾಡಿರುವ ಸಿಎಂ, ಸಾಲಮನ್ನಾ ಕುರಿತು ಪ್ರಧಾನಿ ನರೇಂದ್ರ ಮೋದಿ ದಾರಿ ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆಯು ಸಂಪೂರ್ಣ ತಪ್ಪಾದ, ಸೂಕ್ಷ್ಮವಲ್ಲದ ಮತ್ತು ದುರದೃಷ್ಟಕರ ಎಂದಿದ್ದಾರೆ.
ಸಾಲಮನ್ನಾ ಯೋಜನೆಯ ಬಗ್ಗೆ ಸಂಪೂರ್ಣ ಸತ್ಯವನ್ನು ಅರಿಯದೆ ದೇಶದ ಜನರನ್ನು ಮೋದಿಯವರು ತಪ್ಪು ದಾರಿಗೆ ಎಳೆಯುತ್ತಿರುವುದು ದುಃಖದ ವಿಚಾರ ಎಂದು ಸಿಎಂ ಹೇಳಿದ್ದಾರೆ.
ಮಾನ್ಯ ಪ್ರಧಾನ ಮಂತ್ರಿಗಳೇ ಹೇಳಿಕೆಯನ್ನು ನೀಡುವ ಮುನ್ನ ಯೋಜನೆಯ ಸತ್ಯಾಸತ್ಯತೆಯನ್ನು ಅರಿತುಕೊಳ್ಳಿ. ಬೆಳೆ ಸಾಲಮನ್ನಾವು ಪಾರದರ್ಶಕವಾಗಿದ್ದು, ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಆನ್‌ಲೈನ್‌ನಲ್ಲಿಯೇ ಮಾಹಿತಿ ಲಭ್ಯವಿದೆ. ರಾಜ್ಯದ ಪ್ರತಿಯೊಬ್ಬರ ತೆರಿಗೆ ಹಣವನ್ನು ವ್ಯವಸ್ಥಿತವಾಗಿ ರೈತರ ಕೈಸೇರುವಂತೆ ನೋಡಿಕೊಳ್ಳಲಾಗುತ್ತಿದೆ. ಪ್ರತಿ ರೈತನು ಕೂಡ ಇದರ ಲಾಭವನ್ನು ಪಡೆಯುತ್ತಾನೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರದ ರೈತರ ಸಾಲಮನ್ನಾ ಯೋಜನೆ 'ಅಪಹಾಸ್ಯ' ಎಂದು ಮೋದಿ ಲೇವಡಿ ಮಾಡಿದ್ದ ಪ್ರಧಾನಿ ಮೋದಿ, ರೈತರ ಸಾಲ ಮನ್ನಾ ಘೋಷಣೆ ರೈತರ ಬಗ್ಗೆ ಮಾಡಿದ ಅತ್ಯಂತ ಕ್ರೂರ ಜೋಕ್ ಎಂದು ಟೀಕಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.