ಅತೃಪ್ತ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಿಲ್ಲ, ಸಿದ್ದರಾಮಯ್ಯ ಹತಾಶ ಹೇಳಿಕೆ: ಯಡಿಯೂರಪ್ಪ
ಬಿಜೆಪಿಯ ಕುದುರೆ ವ್ಯಾಪಾರಕ್ಕೆ ನಿಂತಿದೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ...

Published On :
ಬೆಂಗಳೂರು: ಬಿಜೆಪಿಯ ಕುದುರೆ ವ್ಯಾಪಾರಕ್ಕೆ ನಿಂತಿದೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ರಮೇಶ್ ಜಾರಕಿಹೊಳಿ ಸೇರಿ ಕಾಂಗ್ರೆಸ್ ಪಕ್ಷದ ಯಾವುದೇ ಅತೃಪ್ತರ ಶಾಸಕರ ಜೊತೆ ನಾವು ಸಂಪರ್ಕದಲ್ಲಿಲ್ಲ. ಸದ್ಯಕ್ಕೆ ಸರ್ಕಾರ ರಚನೆ ಅಸಾಧ್ಯದ ಮಾತು ಎಂದು ಹೇಳಿದ್ದಾರೆ.
ಜಾರಕಿಗೊಳಿ ಜೊತೆ ಚರ್ಚಿಸಲಾಗಿದೆ ಎಂಬುದೆಲ್ಲಾ ಬರೀ ಊಹಾಪೋಹವಷ್ಟೇ. ನಾವು ಕಾಂಗ್ರೆಸ್ ಅತೃಪ್ತ ಶಾಸಕರ ಜೊತೆಗೆ ಯಾವುದೇ ರೀತಿಯ ಮಾತುಕತೆ ನಡೆಸಿಲ್ಲ ಎಂದು ತಿಳಿಸಿದ್ದಾರೆ.
ಅಲ್ಲದೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ನಾನು ಭೇಟಿಯಾಗಬೇಕಿತ್ತು. ಆದರೆ, ಅವರು ಗುಜರಾತ್'ನಿಂದ ಹಿಂತಿರುಗಿಲ್ಲ. ಈ ಹಿನ್ನಲೆಯಲ್ಲಿ ಪಕ್ಷದ ಅನ್ಯ ಕೆಲ ಹಿರಿಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತೇನೆ. ಈ ಮಾತುಕತೆ ಪಕ್ಷ ಸಂಘಟನೆ, ಲೋಕಸಭಾ ಚುನಾವಣಾ ತಯಾರಿ ಹಾಗೂ ರೈತ ಸಮಾವೇಶಕ್ಕಷ್ಟೇ ಸೀಮಿತವಾಗಿರಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


