ಅಧಿಕೃತವಾಗಿ ಬಿಜೆಪಿ ಸೇರಿದ ಹಾಲಾಡಿ ಶ್ರೀನಿವಾಸ ಶೆಟ್ಟಿ
ಮೂರು ದಿನಗಳ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಕುಂದಾಪುರದ ಹಾಲಾಡಿ ಶ್ರೀನಿವಾಸ ಶೆಟ್ಟಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Published On :
ಬೆಂಗಳೂರು: ಮೂರು ದಿನಗಳ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಕುಂದಾಪುರದ ಹಾಲಾಡಿ ಶ್ರೀನಿವಾಸ ಶೆಟ್ಟಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಶ್ರೀನಿವಾಸ ಶೆಟ್ಟಿ ಬಿಜೆಪಿಗೆ ಸೇರಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್ ಆರ್.ಅಶೋಕ್, ಅರವಿಂದ ಲಿಂಬಾವಳಿ, ಶೋಭಾ ಕರಂದ್ಲಾಜೆ ಸೇರಿ ಹಲವು ಗಣ್ಯರ ಸಮ್ಮುಖದಲ್ಲಿ ಮಾಜಿ ಶಾಸಕ ಪುನಃ ಮಾತೃ ಪಕ್ಷಕ್ಕೆ ಮರಳಿದ್ದಾರೆ.
"ಈ ಹಿಂದೆ ಕ್ಷೇತ್ರದ ಜನತೆಯ ಅಪೇಕ್ಷೆಯಂತೆ ಪಕ್ಷೇತರವಾಗಿ ಸ್ಪರ್ಧಿಸಿದ್ದೆ. ಮೊನ್ನೆ ಸಹ ಅವರ ಆಶಯಕ್ಕೆ ಅನುಸಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಮತ್ತೆ ಬಿಜೆಪಿಗೆ ಮರಳಿದ್ದೇನೆ" ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಶ್ರೀನಿವಾಸ ಶೆಟ್ಟಿ ಸುದ್ದಿಗಾರರೊಡನೆ ಮಾತನಾಡುತ್ತಾ ತಿಳಿಸಿದ್ದಾರೆ.
ಡಿ.ವಿ.ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಡೆ ಕ್ಷಣದಲ್ಲಿ ಮಂತ್ರಿ ಸ್ಥಾನದಿಂದ ವಂಚಿತರಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಾಸಕ ಸ್ಥಾನ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. 2013ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯ ಸಾಧಿಸಿದ್ದರು. ಇದೀಗ ತಮ್ಮ ಬೆಂಬಲಿಗರೊಡನೆ ಪುನಃ ಬಿಜೆಪಿ ಸೇರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿಕುಂದಾಪುರ2018 ವಿಧಾನಸಭೆ ಚುನಾವಣೆKundapur2018 Assembly electionHaladi Srinivas Shettyಹಾಲಾದಿ ಶ್ರೀನಿವಾಸ್ ಶೆಟ್ಟಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


