ಮಂಡ್ಯದಿಂದಲೇ ಸ್ಪರ್ಧೆ: ಮಾಜಿ ಸಚಿವ ಅಂಬರೀಶ್ ಸ್ಪಷ್ಟನೆ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ದ ಅಭ್ಯರ್ಥಿಯಾಗಿಯೇ ತಾವು ಸ್ಪರ್ಧೆ ಮಾಡುತ್ತೇವೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ನಟ ಅಂಬರೀಷ್ ಹೇಳಿದ್ದಾರೆ.

Published On :
ಮದ್ದೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ದ ಅಭ್ಯರ್ಥಿಯಾಗಿಯೇ ತಾವು ಸ್ಪರ್ಧೆ ಮಾಡುತ್ತೇವೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ನಟ ಅಂಬರೀಷ್ ಹೇಳಿದ್ದಾರೆ.
ಮಂಡ್ಯದ ಮದ್ದೂರು ತಾಲ್ಲೂಕಿನ ಡಿಎಕೆರೆ ಗ್ರಾಮದಲ್ಲಿ ನೂತನ ದೇವಾಲಯದ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅಂಬರೀಷ್ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾವು ಮಂಡ್ಯಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಹೇಳಿದರು. ಈ ವೇಳೆ ಕಾಂಗ್ರೆಸ್ ಪಕ್ಷದಿಂದ ನಟಿ ರಮ್ಯಾ ಅವರಿಗೆ ಟಿಕೆಟ್ ನೀಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಂಬರೀಷ್, ಪಕ್ಷದಿಂದ ರಮ್ಯಾ ಆಗಲಿ ಅಥವಾ ಮಾಜಿ ಶಾಸಕ ಮಹೇಶ್ ಚಂದ್ ಅವರಿಗಾಗಲಿ ಯಾರಿಗೇ ಟಿಕೆಟ್ ನೀಡಿದರು ಪಕ್ಷದ ವತಿಯಿಂದ ನಾನು ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.
ಅಂತೆಯೇ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕುರಿತು ಎದ್ದಿರುವ ಊಹಾಪೋಹದ ಕುರಿತು ಮಾತನಾಡಿದ ಅಂಬರೀಷ್, ಜಿಲ್ಲೆಯಲ್ಲಿ ಕೆಲ ಊಹಪೋಹಗಳಿದ್ದು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವುದಾಗಿ ಪ್ರಚಾರ ಮಾಡುತ್ತಿರುವುದು ಶುದ್ಧ ಸುಳ್ಳು. ತಾವು ಕಾಂಗ್ರೆಸ್ ಪಕ್ಷ ದ ನಿಷ್ಠಾವಂತ ಕಾರ್ಯಕರ್ತನಾಗಿದ್ದು ಅನ್ಯ ಪಕ್ಷ ಗಳಿಗೆ ವಲಸೆ ಹೋಗುವುದಿಲ್ಲ. ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ರಾಷ್ಟ್ರೀಯ ಹಬ್ಬಗಳೂ ಸೇರಿದಂತೆ ಸಭೆ ಸಮಾರಂಭಗಳಿಂದ ದೂರ ಉಳಿದಿದಿದ್ದೆ. ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯನಾಗಿ ಭಾಗವಹಿಸುತ್ತೇನೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ambarishಅಂಬರೀಷ್ಮಂಡ್ಯMandyaKarnataka politicsಕರ್ನಾಟಕ ರಾಜಕೀಯKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


