ರಾಜಕೀಯ

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ; ಬಿಜೆಪಿ ರ್ಯಾಲಿ ಉದ್ದೇಶಿಸಿ ಭಾಷಣ, ಬಿಗಿ ಭದ್ರತೆ

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ...

ನಾಳೆ ಬೆಂಗಳೂರಿಗೆ  ಪ್ರಧಾನಿ ಮೋದಿ; ಬಿಜೆಪಿ ರ್ಯಾಲಿ ಉದ್ದೇಶಿಸಿ ಭಾಷಣ, ಬಿಗಿ ಭದ್ರತೆ
ನರೇಂದ್ರ ಮೋದಿ
Published On :
ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅರಮನೆ ಮೈದಾನದಲ್ಲಿ ಬೃಹತ್ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನೇತೃತ್ವದ 90 ದಿನಗಳ ಪರಿವರ್ತನಾ ಯಾತ್ರೆ ಅಂತ್ಯಗೊಂಡಿದ್ದು, ಪ್ರಧಾನಿ ಮೋದಿ ಅವರು ನಾಳೆ ನಡೆಯಲಿರುವ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ಮೋದಿ ಅವರು ನಾಳೆ ಮಧ್ಯಾಹ್ನ ನಗರಕ್ಕೆ ಆಗಮಿಸುತ್ತಿದ್ದು, ಸಂಜೆ ಅರಮನೆ ಮೈದಾನದಲ್ಲಿ ಬಿಜೆಪಿ ರ್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಜನವರಿ 28ರಂದೇ ಬೆಂಗಳೂರಿಗೆ ಆಗಮಿಸಬೇಕಾಗಿತ್ತು. ಆದರೆ ಕೇಂದ್ರ ಬಜೆಟ್ ಹಾಗೂ ಇತರೆ ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಅದನ್ನು ಫೆ.4ಕ್ಕೆ ಮುಂದೂಡಲಾಗಿತ್ತು.
ಬಿಗಿ ಭದ್ರತೆ
ಬಿಜೆಪಿ ರ್ಯಾಲಿ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಅರಮನೆ ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಎಲ್ಲಾ ಕಡೆ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಸುಮಾರು 8 ಗೇಟ್ ಗಳ ಮೂಲಕ ಜನರನ್ನು ಒಳಬಿಡುವ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.
ಭದ್ರತೆಗೆ ಮೂರು ಡಿಸಿಪಿ, 33 ಎಸ್ಪಿ, 250 ಸಬ್ ಇನ್ಸ್ ಪೆಕ್ಟರ್, ಮೂರು ಸಾವಿರ ಪೊಲೀಸರು, 50 ಕೆಎಸ್ ಆರ್ ಪಿ ತುಕಡಿಯನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು. ಅಲ್ಲದೆ ಯಾವುದೇ ಪ್ರತಿಭಟನಾಕಾರರನ್ನು ಒಳಬಿಡುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.