ರಾಜಕೀಯ

ವಿಧಾನಸಭಾ ಚುನಾವಣೆ: ಮಾಜಿ ಶಾಸಕ ಗವಿಯಪ್ಪ, ಎಂ.ವೈ. ಘೋರ್ಪಡೆ ಪುತ್ರ ಬಿಜೆಪಿಗೆ ಸೇರ್ಪಡೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಜಯಭೇರಿ ಬಾರಿಸಿದ್ದ ಆನಂದ್ ಸಿಂಗ್ ಅವರನ್ನು ತನ್ನತ್ತ ಸೆಳೆದುಕೊಂಡ ಕಾಂಗ್ರೆಸ್'ಗೆ ಬಿಜೆಪಿ ಸೆಡ್ಡು ಹೊಡೆದಿದ್ದು, ಬಳ್ಳಾರಿಯ ಮಾಜಿ ಶಾಸಕ ಹೆಚ್.ಆರ್.ಗವಿಯಪ್ಪ ಅವರನ್ನು ತನ್ನತ್ತ ಸೆಳೆದುಕೊಂಡಿದೆ...

ವಿಧಾನಸಭಾ ಚುನಾವಣೆ: ಮಾಜಿ ಶಾಸಕ ಗವಿಯಪ್ಪ, ಎಂ.ವೈ. ಘೋರ್ಪಡೆ ಪುತ್ರ ಬಿಜೆಪಿಗೆ ಸೇರ್ಪಡೆ
ಸಂಗ್ರಹ ಚಿತ್ರ
Published On :
ನವದೆಹಲಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಜಯಭೇರಿ ಬಾರಿಸಿದ್ದ ಆನಂದ್ ಸಿಂಗ್ ಅವರನ್ನು ತನ್ನತ್ತ ಸೆಳೆದುಕೊಂಡ ಕಾಂಗ್ರೆಸ್'ಗೆ ಬಿಜೆಪಿ ಸೆಡ್ಡು ಹೊಡೆದಿದ್ದು, ಬಳ್ಳಾರಿಯ ಮಾಜಿ ಶಾಸಕ ಹೆಚ್.ಆರ್.ಗವಿಯಪ್ಪ ಅವರನ್ನು ತನ್ನತ್ತ ಸೆಳೆದುಕೊಂಡಿದೆ. 
ಇದೇ ವೇಳೆ ಮಾಜಿ ಸಚಿವ ಎಂ.ವೈ ಘೋರ್ಪಡೆ ಪುತ್ರ ಕಾರ್ತಿಕೇಯ ರಾಜೇ ಘೋರ್ಪಡೆ ಕೂಡ ಬಿಜೆಪಿಗೆ ಸೋವಾರ ಸೇರ್ಪಡೆಗೊಂಡಿದ್ದಾರೆ. 
2008ರ ವಿಧಾನಸಭಾ ಚುನಾವಣೆಯಲ್ಲಿ ಆನಂದ್ ಸಿಂಗ್ ವಿರುದ್ಧ ಸ್ಪರ್ಧಿಸಿ ಗವಿಯಪ್ಪ ಅವರು ಪರಾಭವಗೊಂಡಿದ್ದರು. ದೆಹಲಿಯಲ್ಲಿನ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವಾರದ ಅನಂತ್ ಕುಮಾರ್, ಡಿ.ವಿ. ಸದಾನಂದ ಗೌಡ, ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜವಡೇಕರ್ ಮತ್ತು ಬಳ್ಳಾರಿ ಸಂಸದ ಶ್ರೀ ರಾಮುಲು ಅವರ ಸಮ್ಮುಖದಲ್ಲಿ ಇಬ್ಬರೂ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು, ಜವಡೇಕರ್ ಅವರು ಇಬ್ಬರು ನಾಯಕರಿಗೂ ಪಕ್ಷದ ಪ್ರಾಥಮಿತ ಸದಸ್ಯತ್ವ ನೀಡಿದರು. 
ಗವಿಯಪ್ಪ ಅವರು ಹೊಸಪೇಟೆ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ. ಹೊಸಪೇಟೆ ಶಾಸಕರಾಗಿದ್ದ ಆನಂತ್ ಸಿಂಗ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ವಿಧಾನಸಬೆ ಚುನಾವಣೆಯಲ್ಲಿ ಅವರು ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸುವುದು ಖಚಿತವಾದ ಹಿನ್ನಲೆಯಲ್ಲಿ ಗವಿಯಪ್ಪ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.