ರಾಜಕೀಯ

ರಾಹುಲ್ ಗಾಂಧಿ ಈಗ ಪ್ರಧಾನಿ ಮೋದಿಗಿಂತಲೂ ಮಿಗಿಲು: ವೀರಪ್ಪ ಮೊಯ್ಲಿ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗಿಂತಲೂ ಮಿಗಿಲಾಗಿದ್ದು, ಅವರು ಈ ದೇಶದ ಪ್ರಧಾನಿಯಾಗಬೇಕು....

ರಾಹುಲ್ ಗಾಂಧಿ ಈಗ ಪ್ರಧಾನಿ ಮೋದಿಗಿಂತಲೂ ಮಿಗಿಲು: ವೀರಪ್ಪ ಮೊಯ್ಲಿ
ವೀರಪ್ಪ ಮೊಯ್ಲಿ
Published On :
ಹೈದರಾಬಾದ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗಿಂತಲೂ ಮಿಗಿಲಾಗಿದ್ದು, ಅವರು ಈ ದೇಶದ ಪ್ರಧಾನಿಯಾಗಬೇಕು ಎಂಬುದು ಪಕ್ಷ ಮತ್ತು ಯುವಕರ ಆಶಯವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರು ಮಂಗಳವಾರ ಹೇಳಿದ್ದಾರೆ.
ಈ ಹಿಂದೆ ಕಾಂಗ್ರೆಸ್ ನಲ್ಲಿದ್ದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥ ಮಮತಾ ಬ್ಯಾನರ್ಜಿ ಅವರು ಯುಪಿಎ ಮುನ್ನಡೆಸುವ ಮಹತ್ವಾಕಾಂಕ್ಷೆ ಹೊಂದಿದ್ದಾರೆ ಎಂಬ ಮಾಧ್ಯಮಗಳ ವರದಿಯ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ಮೊಹ್ಲಿ, ಮಹತ್ವಾಕಾಂಕ್ಷೆ ಬೇರೆ. ಆದರೆ ವಾಸ್ತವದ ಸತ್ಯ ಬೇರೇನೆ ಇದೆ ಎಂದಿದ್ದಾರೆ.
ಕಾಂಗ್ರೆಸ್ ಒಂದು ಬಪಿಷ್ಠ ರಾಷ್ಟ್ರೀಯ ಪಕ್ಷವಾಗಿದ್ದು, ದೇಶಾದ್ಯಂತ ತನ್ನ ಅಸ್ತಿತ್ವ ಉಳಿಸಿಕೊಂಡಿದೆ ಮತ್ತು ಸಂಸತ್ತಿನಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ನೇತೃತ್ವ ವಹಿಸಿಕೊಳ್ಳುವ ಸಾಮರ್ಥ್ಯ ಹೊಂದಿದೆ ಎಂದು ಮಾಜಿ ಕೇಂದ್ರ ಸಚಿವರು ಹೇಳಿದ್ದಾರೆ.
ರಾಷ್ಟ್ರ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಯ ಜನಪ್ರಿಯತೆ ಕಡಿಮೆಯಾಗುತ್ತಿದೆ ಎಂಬುದುಕ್ಕೆ ಇತ್ತೀಚಿಗೆ ನಡೆದ ರಾಜಸ್ಥಾನ ಉಪ ಚುನಾವಣೆಯ ಫಲಿತಾಂಶವೇ ಸಾಕ್ಷಿ. ಬರಿ ಮಾತಿಗೆ ಜನ ಮರುಳಾಗುವುದಿಲ್ಲ. ಅವರು(ಬಿಜೆಪಿ) ಹೇಳಿದ್ದು, ಈಗ ಮಾಡುತ್ತಿರುವುದು ಮತ್ತೊಂದು ಎಂದು ಬಿಜೆಪಿ ವಿರುದ್ಧ ಮೊಯ್ಲಿ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.