ರಾಜಕೀಯ

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿ, ಜೆಡಿಎಸ್ ನಿಂದ ಮೈತ್ರಿ ಅಭ್ಯರ್ಥಿಗಳು ಕಣಕ್ಕೆ!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಸರ್ಕಾರ ರಚನೆ ಮಾಡುವ ಪಣ ತೊಟ್ಟಿರುವ ಜ್ಯಾತ್ಯಾತೀತ ಜನತಾದಳ ಪಕ್ಷ ಬಹುಜನ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಮುನ್ಸೂಚನೆ ನೀಡಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿ, ಜೆಡಿಎಸ್ ನಿಂದ ಮೈತ್ರಿ ಅಭ್ಯರ್ಥಿಗಳು ಕಣಕ್ಕೆ!
ಜೆಡಿಎಸ್-ಬಿಎಸ್ಪಿ ಮೈತ್ರಿ (ಸಂಗ್ರಹ ಚಿತ್ರ)
Published On :
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಸರ್ಕಾರ ರಚನೆ ಮಾಡುವ ಪಣ ತೊಟ್ಟಿರುವ ಜ್ಯಾತ್ಯಾತೀತ ಜನತಾದಳ ಪಕ್ಷ ಬಹುಜನ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಮುನ್ಸೂಚನೆ ನೀಡಿದೆ.
ಮೂಲಗಳ ಪ್ರಕಾರ ಬಿಎಸ್ಪಿ ಮತ್ತು ಜೆಡಿಎಸ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದು, ಚುನವಣೆಯಲ್ಲಿ ಉಭಯ ಪಕ್ಷಗಳ ಮೈತ್ರಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬಿಎಸ್ ಪಿ  ಮುಖಂಡ ಎಸ್ ಸಿ ಮಿಶ್ರಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಒಟ್ಟು 224 ಕ್ಷೇತ್ರಗಳಲ್ಲಿ ಬಿಎಸ್ ಪಿ ಪಕ್ಷ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಹೇಳಲಾಗಿದೆ. ಅಂತೆಯೇ 30 ಜಿಲ್ಲೆಗಳ 14 ಕ್ಷೇತ್ರಗಳಲ್ಲಿ ಜೆಡಿಎಸ್-ಬಿಎಸ್ಪಿ  ಮೈತ್ರಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
ಇನ್ನು ಇದೇ ಫೆಬ್ರವರಿ 17ರಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಅಂದೇ ದೇವೇಗೌಡ ಅವರೊಂದಿಗೆ ಸೇರಿ ಬೃಹತ್ ಸಮಾವೇಶ ನಡೆಸುವ  ಮೂಲಕ ಚುನಾವಣೆಯಲ್ಲಿ ಬಿಎಸ್ಪಿ-ಜೆಡಿಎಸ್ ಮೈತ್ರಿಯನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ಇನ್ನು ಈ ಮೈತ್ರಿ ಬಗ್ಗೆ ಜೆಡಿಎಸ್ ಮುಖಂಡರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.