ರಾಜಕೀಯ

ಶೋಭಾ ಅವರ ಬಾಯಿ ಮುಚ್ಚಿಸಲು ಬಿಜೆಪಿಯಲ್ಲಿ ಯಾರಾದರೂ ಇದ್ದಾರೆಯೇ?: ರಾಮಲಿಂಗಾ ರೆಡ್ಡಿ

ಬಿಜೆಪಿ ಕಾರ್ಯಕರ್ತ ಸಂತೋಶ್ ಕೊಲೆಯಾದ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾರ್ಟಿ ಮಾಡುತ್ತಿದ್ದರು ...

ಶೋಭಾ ಅವರ ಬಾಯಿ ಮುಚ್ಚಿಸಲು ಬಿಜೆಪಿಯಲ್ಲಿ ಯಾರಾದರೂ ಇದ್ದಾರೆಯೇ?: ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ-ಶೋಭಾ ಕರಂದ್ಲಾಜೆ
Published On :
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಸಂತೋಶ್ ಕೊಲೆಯಾದ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾರ್ಟಿ ಮಾಡುತ್ತಿದ್ದರು ಎಂಬ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ ಹಿನ್ನೆಲೆಯಲ್ಲಿ ನಿನ್ನೆ ಸದನದಲ್ಲಿ ತೀವ್ರ ಗದ್ದಲ, ಕೋಲಾಹಲವುಂಟಾಯಿತು. ಸಂತೋಷ್ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬದವರಿಗೆ ಸಾಂತ್ವನ ಹೇಳುವುದರ ಬದಲಿಗೆ ಸಚಿವರೊಬ್ಬರ ಮನೆಯಲ್ಲಿ ರಾತ್ರಿಯ ಔತಣಕೂಟದಲ್ಲಿ ಭಾಗವಹಿಸಿರುವುದು ಖಂಡನೀಯ ಎಂದು ಬಿಜೆಪಿ ನಾಯಕರು ಸದನದಲ್ಲಿ ಆರೋಪಿಸಿದರು.
ಸಂಸದೆ ಶೋಭಾ ಕರಂದ್ಲಾಜೆಯವರ ಟೀಕೆಗೆ ನಿನ್ನೆ ವಿಧಾನಸಭೆಯಲ್ಲಿ ವಿರೋಧ ವ್ಯಕ್ತಪಡಿಸಿದ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಅಲ್ಪಸಂಖ್ಯಾತರ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಸಿದ್ದರಾಮಯ್ಯನವರು ಸಚಿವ ಯು.ಟಿ.ಖಾದರ್ ಮನೆಗೆ ಹೋಗಿದ್ದರು. ಆದರೆ ಮುಖ್ಯಮಂತ್ರಿಯವರು ಔತಣಕೂಟದಲ್ಲಿ ಭಾಗವಹಿಸಿ ಮೋಜು ಮಸ್ತಿ ಮಾಡುತ್ತಿದ್ದರು ಎಂದು ಹೇಳುವ ಮೂಲಕ ಶೋಭಾ ಕರಂದ್ಲಾಜೆ ಮಿತಿ ಮೀರಿದ್ದಾರೆ. ಸಿದ್ದರಾಮಯ್ಯನವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಅವರ ವಿರುದ್ಧ ಶೋಭಾ ಅವರು ಅಂತಹ ಹೇಳಿಕೆಯನ್ನು ನೀಡಲು ಹೇಗೆ ಸಾಧ್ಯ ಎಂದು ಕೇಳಿದರು.
ಈಶ್ವರಪ್ಪ, ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಮತ್ತು ಇತರ ಬಿಜೆಪಿ ಮುಖಂಡರು ಕೂಡ ಔತಣಕೂಟಕ್ಕೆ ಹೋಗುತ್ತಾರೆ. ಅಲ್ಲಿ ನೀವು ಊಟ ಮಾಡುತ್ತಿರೊ ಅಥವಾ ಡ್ಯಾನ್ಸ್, ಮೋಜಿ-ಮಸ್ತಿ ಮಾಡುತ್ತೀರೋ ಎಂದು ಪ್ರಶ್ನಿಸಿದ ರಾಮಲಿಂಗಾ ರೆಡ್ಡಿ, ನೀವೆಲ್ಲಾ ಆಕೆಗೆ ಏಕೆ ಏನೂ ಹೇಳುತ್ತಿಲ್ಲ, ಶೋಭಾ ಅವರ ಬಾಯಿ ಮುಚ್ಚಿಸಲು ಬಿಜೆಪಿಯಲ್ಲಿ ಯಾರಾದರೂ ಇದ್ದಾರಾ? ಎಂದು ಪ್ರಶ್ನಿಸಿದರು.
ಇದರಿಂದ ಕೆರಳಿದ ಬಿಜೆಪಿ ನಾಯಕರು ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ನಾಯಕಿ ರಮ್ಯಾ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು.  ಯಾವ ಪರಿಜ್ಞಾನವಿಲ್ಲದೆ ಟ್ವೀಟ್ ಮಾಡುವ ರಮ್ಯಾರನ್ನೇಕೆ ಕಾಂಗ್ರೆಸ್ ನಾಯಕರು ನಿಯಂತ್ರಿಸುತ್ತಿಲ್ಲ ಎಂದು ಬಿಜೆಪಿಯ ಕೋಟ ಶ್ರೀನಿವಾಸ್ ಪೂಜಾರಿ ಕೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.