ರಾಜಕೀಯ

ಇಂಥ ನೀಚ ಮುಖ್ಯಮಂತ್ರಿಯನ್ನು ಬೆಳೆಸಿದ್ದೇ ನನ್ನ ಜೀವನದ ಮಹಾಪರಾಧ: ಎಚ್ ಡಿ ದೇವೇಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ಇಂಥ ನೀಚ ಮುಖ್ಯಮಂತ್ರಿಯನ್ನು ಬೆಳೆಸಿದ್ದು...

ಇಂಥ ನೀಚ ಮುಖ್ಯಮಂತ್ರಿಯನ್ನು ಬೆಳೆಸಿದ್ದೇ ನನ್ನ ಜೀವನದ ಮಹಾಪರಾಧ: ಎಚ್ ಡಿ ದೇವೇಗೌಡ
ಎಚ್ ಡಿ ದೇವೇಗೌಡ
Published On :
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ಇಂಥ ನೀಚ ಮುಖ್ಯಮಂತ್ರಿಯನ್ನು ಬೆಳೆಸಿದ್ದು ನಾನು ನನ್ನ ಜೀವನದಲ್ಲಿ ಮಾಡಿದ ಮಹಾಪರಾಧ ಎಂದು ಹೇಳಿದ್ದಾರೆ. 
ಕೆಂಗೇರಿ ಉಪನಗರದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ದೇವೇಗೌಡ ಅವರು, ಇಂದು ಕಾಂಗ್ರೆಸ್ ನಲ್ಲಿ ಸೋನಿಯಾ ಗಾಂಧಿ ಬಲ ಕುಗ್ಗಿದೆ. ಇದನ್ನೇ ನೆಪ ಮಾಡಿಕೊಂಡಿರುವ ಮುಖ್ಯಮಂತ್ರಿಗಳು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯ ಕೀಳು ಮಟ್ಟದ ರಾಜಕಾರಣಿ ಎಂದು ಕಿಡಿಕಾರಿದರು. 
ರಾಜ್ಯದ ಜನರ ಮನ ಗೆಲ್ಲುವ ಸಂದರ್ಭದಲ್ಲಿ ಸಿದ್ದರಾಮಯ್ಯನಿಗೆ ಈ ದೇವೇಗೌಡ ಬೇಕಾಗಿದ್ದ. ಆದರೆ ಈಗ ಮುಖ್ಯಮಂತ್ರಿ ಆದ ಬಳಿಕ ಶ್ರವಣ ಬೆಳಗೊಳದ ಕಾರ್ಯಕ್ರಮದಲ್ಲಿ ನನಗೇ ಮಾತನಾಡುವುದಕ್ಕೆ ಅವಕಾಶ ಕೊಡಲಿಲ್ಲ. ನಿಮ್ಮ ಅಧಿಕಾರ ಎಷ್ಟು ದಿವಸ ಇರುತ್ತದೆ ಎಂದು ನಾನು ನೋಡುತ್ತೇನೆ ಎಂದು ಹೇಳಿದ್ದಾರೆ. 
ಇದೇ ವೇಳೆ ರಾಜ್ಯದ ಖಜಾನೆಯನ್ನು ನೀವು ಲೂಟಿ ಮಾಡುತ್ತ ಇದ್ದೀರಿ. ನೀವು ಏನೇನು ಮಾಡಿದ್ದೀರಿ ಎಂಬುದನ್ನು ದಾಖಲೆ ಸಮೇತ ಮಾತನಾಡುತ್ತೇನೆ. ಇನ್ನೇನು ನಿಮ್ಮ ಟೈಂ ಮುಗಿಯುತ್ತ ಬಂದಿದೆ ಎಂದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.