ಅಮಿತ್ ಶಾ ಹಿಂದೂವೇ ಅಲ್ಲ, ಜೈನ ಧರ್ಮಕ್ಕೆ ಸೇರಿದವರು: ರಾಮಲಿಂಗಾ ರೆಡ್ಡಿ
ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಿಂದೂವೇ ಅಲ್ಲ, ಅವರು ಜೈನ ಧರ್ಮಕ್ಕೆ ಸೇರಿದವರು. ಆದರೂ ಪದೇ ಪದೇ ಹಿಂದೂಗಳನ್ನು ಗುತ್ತಿಗೆ ತೆಗೆದುಕೊಂಡಂತೆ....

Published On :
ಬೆಂಗಳೂರು: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಿಂದೂವೇ ಅಲ್ಲ, ಅವರು ಜೈನ ಧರ್ಮಕ್ಕೆ ಸೇರಿದವರು. ಆದರೂ ಪದೇ ಪದೇ ಹಿಂದೂಗಳನ್ನು ಗುತ್ತಿಗೆ ತೆಗೆದುಕೊಂಡಂತೆ ಮಾತನಾಡುತ್ತಾರೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.
ಇಂದು ನಗರದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ದೇವಸ್ಥಾನ ಭೇಟಿ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ ಅವರು, ಈ ಹಿಂದೆ ರಾಜೀವ್ ಗಾಂಧಿ, ಇಂದಿರಾ ಗಾಂಧಿ ಕೂಡ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದರು. ಕರ್ನಾಟಕದಲ್ಲಿಯೂ ಹಲವಾರು ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಹೀಗಿರುವಾಗ ರಾಹುಲ್ ಗಾಂಧಿ ದೇವಸ್ಥಾನಗಳಿಗೆ ಭೇಟಿ ನೀಡುವುದರಲ್ಲಿ ತಪ್ಪೇನಿದೆ?" ಎಂದು ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿ ದೇವಸ್ಥಾನ ಭೇಟಿಯನ್ನು ಯಡಿಯೂರಪ್ಪ ಟೀಕಿಸುತ್ತಿದ್ದಾರೆ, ಬಿಜೆಪಿಯವರು ಕೇವಲ ಓಟಿನ ಹಿಂದೂಗಳಷ್ಟೇ. ಅವರೇನು ಹಿಂದೂ ಧರ್ಮವನ್ನು ಗುತ್ತಿಗೆ ತೆಗೆದುಕೊಂಡಿದ್ದಾರಾ?, ಅಷ್ಟಕ್ಕೂ ಅಮಿತ್ ಶಾ ಹಿಂದೂವೇ ಅಲ್ಲ. ಅವರು ಜೈನ ಧರ್ಮಕ್ಕೆ ಸೇರಿದವರು ಎಂದು ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದರು.
ಯಡಿಯೂರಪ್ಪ ಸ್ಲಂ ವಾಸ್ತವ್ಯ ಕೇವಲ ನಾಟಕ ಎಂದ ಗೃಹ ಸಚಿವರು, ಸ್ಲಂಗೆ ಹೋಗುವುದಾದರೆ ಬೆಳಗ್ಗೆ ಹೋಗಬೇಕು. ರಾತ್ರಿ ಸಮಯದಲ್ಲಿ ವಾಸ್ತವ್ಯ ಹೂಡಿ ಸ್ಲಂಗಳನ್ನು ಇವರು ಉದ್ಧಾರ ಮಾಡುತ್ತಾರೆ. ಅವರು ಹೈಟೆಕ್ ಸ್ಲಂಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


