ಕೋಮು ಸೌಹಾರ್ಧ ಕೆರಳಿಸುವ ಹೇಳಿಕೆ ಬೇಡ: ಅನಂತ್ ಕುಮಾರ್ ಹೆಗ್ಡೆಗೆ ಬಿಎಸ್ ವೈ ಎಚ್ಚರಿಕೆ!
ಕೋಮುಗಳ ನಡುವಿನ ಸೌಹಾರ್ಧ ಸಂಬಂಧ ಕೆರಳಿಸುವ ಹೇಳಿಕೆಗಳನ್ನು ನೀಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Published On :
ಬೆಂಗಳೂರು: ಕೋಮುಗಳ ನಡುವಿನ ಸೌಹಾರ್ಧ ಸಂಬಂಧ ಕೆರಳಿಸುವ ಹೇಳಿಕೆಗಳನ್ನು ನೀಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಎನ್ ಡಿಟಿವಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ಧಾರ್ಮಿಕ ಧ್ರುವೀಕರಣದಿಂದ ರಾಜಕೀಯ ಲಾಭ ಪಡೆಯುವ ಉದ್ದೇಶ ಬಿಜೆಪಿಗೆ ಇಲ್ಲ. ಆದರೆ ಈ ಕೆಲಸ ಮಾಡುತ್ತಿರುವುದು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ರಾಜ್ಯದಲ್ಲಿ ಇಲ್ಲಿಯವರೆಗೂ 24 ಮಂದಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ. ಇಲ್ಲಿಯವರೆಗೂ ಕಾಂಗ್ರೆಸ್ ಸರ್ಕಾರ ಯಾವ ಪ್ರಕರಣ ಸಂಬಂಧವೂ ಕಠಿಣ ಕ್ರಮ ಕೈಗೊಂಡಿಲ್ಲ. ತಾನು ಕೋಮುವಾದಿ ಅಲ್ಲ ಎನ್ನುತ್ತಲೇ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೋಮುವಾದಿ ರಾಜಕಾರಣ ಮಾಡುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆ ಹತ್ತಿರಕ್ಕೆ ಬರುತ್ತಲೇ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ. ರಾಹುಲ್ ಗಾಂಧಿ ಕೇವಲ ಎಲೆಕ್ಷನ್ ಹಿಂದೂ ಎಂದು ಕಿಡಿಕಾರಿದ್ದಾರೆ.
ಕೋಮು ಸೌಹಾರ್ಧ ಕೆರಳಿಸುವ ಹೇಳಿಕೆ ಬೇಡ: ಬಿಜೆಪಿ ಮುಖಂಡರಿಗೆ ಎಚ್ಚರಿಕೆ
ಇದೇ ವೇಳೆ ಕೋಮು ಸೌಹಾರ್ಧ ಕೆರಳಿಸುವ ಹೇಳಿಕೆಗಳನ್ನು ನೀಡದಂತೆ ಬಿಜೆಪಿ ಮುಖಂಡರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದ ಬಿಎಸ್ ಯಡಿಯೂರಪ್ಪ, ಯಾವುದೇ ನಾಯಕನೂ ಕೂಡ ಸಮುದಾಯಗಳ ಭಾವನೆ ಕೆರಳಿಸುವ ಹೇಳಿಕೆ ನೀಡಬಾರದು ಎಂದು ಹೇಳಿದರು. ಇದೇ ವೇಳೆ ಅನಂತ್ ಕುಮಾರ್ ಹೆಗ್ಡೆ ವಿಚಾರ ಪ್ರಸ್ತಾಪಿಸಿದ ಬಿಎಸ್ ವೈ, ಅಂತಹ ಹೇಳಿಕೆಗಳನ್ನು ನಾನು ಸಮರ್ಥಿಸಿಕೊಳ್ಳುವುದಿಲ್ಲ, ಅನಂತ್ ಕುಮಾರ್ ಹೆಗ್ಡೆ ಅವರಿಗೆ ಈ ಬಗ್ಗೆ ಸಲಹೆ ನೀಡಲಾಗಿದ್ದು, ಹೆಗ್ಡೆ ಕೂಡ ತಮ್ಮ ಹೇಳಿಕೆ ಸಂಬಂಧ ಸಂಸತ್ ನಲ್ಲಿ ಕ್ಷಮೆ ಯಾಚಿಸಿದ್ದಾರೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
"ಯಾರೊಬ್ಬರು ಸಮುದಾಯಗಳನ್ನು ಕೆರಳಿಸುವ ಹೇಳಿಕೆ ನೀಡಬಾರದು. ನಾನು ಅಂತಹ ಯಾವುದೇ ಹೇಳಿಕೆಗಳನ್ನು ಒಪ್ಪುವುದಿಲ್ಲ. ಅನಂತ ಕುಮಾರ್ ಹೆಗ್ಡೆಗೆ ನಾನು ಇಂತಹ ಹೇಳಿಕೆಗಳನ್ನು ನೀಡದಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruBS Yeddyurappaಬಿಎಸ್ ಯಡಿಯೂರಪ್ಪಅನಂತ್ ಕುಮಾರ್ ಹೆಗ್ಡೆAnant Kumar HegdeKarnataka politicsಕರ್ನಾಟಕ ರಾಜಕೀಯCommunal Remarksಕೋಮುವಾದ ಹೇಳಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


