ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದರ್ಶನ ಪಡೆಯೋ ರಾಹುಲ್ 'ಎಲೆಕ್ಷನ್ ಹಿಂದೂ': ಬಿಎಸ್ ಯಡಿಯೂರಪ್ಪ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕರ್ನಾಟಕ ಪ್ರವಾಸ ಮುಂದುವರೆದಿರುವಂತೆಯೇ ಅವರ ವಿರುದ್ಧ ಟ್ವೀಟ್ ವಾರ್ ಮುಂದವರೆಸಿರುವ ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದರ್ಶನ ಪಡೆಯೋ ರಾಹುಲ್ 'ಎಲೆಕ್ಷನ್ ಹಿಂದೂ' ಎಂದು ವ್ಯಂಗ್ಯವಾಡಿದ್ದಾರೆ.

Published On :
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕರ್ನಾಟಕ ಪ್ರವಾಸ ಮುಂದುವರೆದಿರುವಂತೆಯೇ ಅವರ ವಿರುದ್ಧ ಟ್ವೀಟ್ ವಾರ್ ಮುಂದವರೆಸಿರುವ ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದರ್ಶನ ಪಡೆಯೋ ರಾಹುಲ್ 'ಎಲೆಕ್ಷನ್ ಹಿಂದೂ' ಎಂದು ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ನಿನ್ನೆ ಟ್ವೀಟ್ ಮಾಡಿರುವ ಬಿಎಸ್ ಯಡಿಯೂರಪ್ಪ ಅವರು, ಪತ್ರಿಕೆಗಳ ಎರಡು ವರದಿಗಳನ್ನು ಹಿನ್ನಲೆಯಾಗಿಸಿಕೊಂಡು ಟ್ವೀಟ್ ಮಾಡಿದ್ದು, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದರ್ಶನ ಪಡೆಯೋ ರಾಹುಲ್ 'ಎಲೆಕ್ಷನ್ ಹಿಂದೂ' ಎಂದು ಕಿಡಿಕಾರಿದ್ದಾರೆ. ಅಂತೆಯೇ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವೂ ಹರಿಹಾಯ್ದಿರುವ ಬಿಎಸ್ ವೈ, ಮೀನು ತಿಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
"ಮೀನು ತಿಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯೋ ಸಿಎಂ ಸಿದ್ದರಾಮಯ್ಯ ಒಂದೆಡೆಯಾದರೆ, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ಎಲೆಕ್ಷನ್ ಹಿಂದೂ ರಾಹುಲ್ ಗಾಂಧಿ ಮತ್ತೊಂದು ಕಡೆ. ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್ ಧಕ್ಕೆ ತರುತ್ತಿದೆ? ಎಲ್ಲರನ್ನೂ ಸಮನಾಗಿ ಕಾಣುವುದು ಸಮಾಜವಾದ, ನಿಮ್ಮದು ಮಜಾವಾದ ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾಂಸಾಹಾರ ಸೇವಿಸಿರಲಿಲ್ಲ: ಉಸ್ತುವಾರಿ ಶಿವರಾಜ್ ತಂಗಡಗಿ ಸ್ಪಷ್ಟನೆ
ಇನ್ನು ಬಿಎಸ್ ಯಡಿಯೂರಪ್ಪ ಅವರ ಟ್ವೀಟ್ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆಯೇ ಇದಕ್ಕೆ ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಮುಖಂಡ ಶಿವರಾಜ್ ತಂಗಡಗಿ ಅವರು, ಬಿಜೆಪಿ ನಾಯಕರ ಆರೋಪದಲ್ಲಿ ಹುರುಳಿಲ್ಲ. ದೇವಸ್ಥಾನಕ್ಕೆ ಹೋಗುವ ಮುನ್ನ ರಾಹುಲ್ ಮಾಂಸಾಹಾರ ಸೇವನೆ ಮಾಡಿರಲಿಲ್ಲ. ಅಂದು ಉಪಾಹಾರ ಕೂಟದಲ್ಲಿ ನಾನೂ ಇದ್ದೆ. ರಾಹುಲ್ ಗಾಂಧಿ ಉಪಾಹಾರಕ್ಕೆ ಚಪಾತಿ, ಆಲೂಗೆಡ್ಡೆ ಪಲ್ಯ, ದಾಲ್ ಮತ್ತು ಪಾಯಸ ಸೇವಿಸಿದ್ದರು ಎಂದು ಸ್ಪಷ್ಟನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengaluruTwitterಟ್ವಿಟರ್Rahul Gandhiರಾಹುಲ್ ಗಾಂಧಿBS Yeddyurappaಬಿಎಸ್ ಯಡಿಯೂರಪ್ಪKarnataka politicsಕರ್ನಾಟಕ ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


