ರಾಹುಲ್ ಗಾಂಧಿ ಹೈದ್ರಾಬಾದ್-ಕರ್ನಾಟಕ ಯಾತ್ರೆ ಕಲಬುರಗಿಯಲ್ಲಿ ಮುಕ್ತಾಯ
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೈಗೊಂಡಿದ್ದ ಮೂರು ದಿನಗಳ ರಾಜ್ಯ ಪ್ರವಾಸ ಕಲಬುರಗಿಯಲ್ಲಿ ನಡೆದ ಸಾರ್ವಜನಿಕ ಸಭೆ ,...

Published On :
ಕಲಬುರಗಿ: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೈಗೊಂಡಿದ್ದ ಮೂರು ದಿನಗಳ ರಾಜ್ಯ ಪ್ರವಾಸ ಕಲಬುರಗಿಯಲ್ಲಿ ನಡೆದ ಸಾರ್ವಜನಿಕ ಸಭೆ ಮೂಲಕ ಅಂತ್ಯಗೊಂಡಿದೆ.
ಸೋಮವಾರ ಹೈದ್ರಾಬಾದ್ ಕರ್ನಾಟಕದ ಎನ್ ಮೈದಾನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ರಾಹುಲ್ ಮಾತನಾಡಿದರು. ನಂತರ ಶರಣಬಸವೇಶ್ವರ ದೇವಾಲಯ ಮತ್ತು ಖಾಜಾ ಬಂದೇನವಾಜ್ ದರ್ಗಾಗಳಿಗೆ ಸೋಮವಾರ ಭೇಟಿ ನೀಡಿದರು.
ಸಂಜೆ 5.20 ಕ್ಕೆ ಕಲಬುರಗಿಗೆ ಬರಬೇಕಿದ್ದ ರಾಹುಲ್ ರಾತ್ರಿ 8.30ಕ್ಕೆ ಆಗಮಿಸಿದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ 2009 ಲೋಕಸಭಾ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಸಮಯದಲ್ಲಿ ಮಾತನಾಡಿದ್ದ ಅವರು, ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಸಂವಿಧಾನದ 371ನೇ ಪರಿಚ್ಛೇದವನ್ನು ತಿದ್ದುಪಡಿ ಮಾಡುವುದಾಗಿ ಭರವಸೆ ನೀಡಿದ್ದನ್ನು ಸ್ಮರಿಸಿದರು.
ರಾತ್ರಿ 9.40 ಕ್ಕೆ ತಮ್ಮ ಭಾಷಣ ಮುಗಿಸಿದ ರಾಹುಲ್ ಗಾಂಧಿ, ಸಂಸ್ಥಾನ ಶ್ರೀ ಶರಣಬಸವೇಶ್ವರಪ್ಪ ಅಪ್ಪ ಮಠದ ಪೀಠಾಧಿಪತಿ ಶ್ರೀ ಶರಣಬಸವೇಶ್ವರ ಮತ್ತು ಖಾಜಾ ಬಂದೇನವಾಜ್ ದರ್ಗಾದ ಸಜ್ಜಾದ್ ನಿಶಾನ್ ರನ್ನು ಭೇಟಿ ಮಾಡಿದರು.
ಇನ್ನೂ ಸೋಮವಾರ ಜೇವರ್ಗಿಗೆ ರಾಹುಲ್ ಗಾಂಧಿ ಭೇಟಿ ನೀಡುವ ವೇಳೆಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಸುಮಾರು 100 ಮಂದಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಜೊತೆಗೆ ಇದೇ ಕಾರಣಕ್ಕೆ ಕಲಬುರಗಿಯಲ್ಲಿಯೂ 40 ಮಂದಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.
ಜೇವರ್ಗಿಯಲ್ಲಿ ಅಂಗಡಿಗಳನ್ನು ಮುಚ್ಚುವಂತೆ ಹೇಳಿದ್ದರಿಂದ ಮಾಲೀಕರಿಗೂ ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಮಧ್ಯಾಹ್ನ 1 ಗಂಟೆ ವರೆಗೂ ವ್ಯಾಪಾರ ನಡೆಸಲು ಪೊಲೀಸರು ಅನುಮತಿ ನೀಡಿದರು. ಜೇವರ್ಗಿ ಮತ್ತು ಕಲಬುರಗಿಯಲ್ಲಿ ನಡೆದ ರಾಹುಲ್ ಕಾರ್ಯಕ್ರಮದಿಂದ ಸಿಎಂ ಸಿದ್ದರಾಮಯ್ಯ ದೂರ ಉಳಿದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


