ದಲಿತರೇನು ಪಾಪಿಗಳಾ?: ಬಿಜೆಪಿ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ
ಬಿಜೆಪಿ ನಾಯಕರು ಪ್ರತಿ ಬಾರಿ ತಾವು ದಲಿತರ ಮನೆಯಲ್ಲಿ ಊಟ ಮಾಡಿದೆವು, ಉಪಾಹಾರ ಸೇವಿಸಿದೆವು, ದಲಿತರ ಮನೆಯಲ್ಲಿ ವಾಸ್ತವ್ಯ ಮಾಡಿದೆವು ಎಂದು...

Published On :
ಕಲಬುರ್ಗಿ: ಬಿಜೆಪಿ ನಾಯಕರು ಪ್ರತಿ ಬಾರಿ ತಾವು ದಲಿತರ ಮನೆಯಲ್ಲಿ ಊಟ ಮಾಡಿದೆವು, ಉಪಾಹಾರ ಸೇವಿಸಿದೆವು, ದಲಿತರ ಮನೆಯಲ್ಲಿ ವಾಸ್ತವ್ಯ ಮಾಡಿದೆವು ಎಂದು ಹೇಳುತ್ತಾರೆ. ಹಾಗಾದರೆ ದಲಿತರೇನು ಪಾಪಿಗಳಾ? ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಖಾರವಾಗಿಯೇ ಪ್ರಶ್ನಿಸಿದ್ದಾರೆ.
ಇಂದು ನಗರದಲ್ಲಿ ವೈಫೈ ಸೌಲಭ್ಯ ಸೇರಿದಂತೆ ಇತರೆ ಯೋಜನೆಗಳ ಲೋಕಾಪರ್ಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ನಾನು ಕೊಳೆಗೇರಿಯಿಂದಲೇ ಈ ಮಟ್ಟಕ್ಕೆ ಬೆಳೆದಿದ್ದೇನೆ. ಆದರೆ ಬಿಜೆಪಿಯವರು ದಲಿತರ ಮನೆಯಲ್ಲಿ ಊಟ ಮಾಡುವುದೇ ದೊಡ್ಡ ಸಾಧನೆ ಎಂಬಂತೆ ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ದಲಿತರೇನು ವಿಷ ಉಣ್ಣಿಸುತ್ತಾರಾ?, ಎಲ್ಲರೂ ಊಟ ಮಾಡುವುದನ್ನೇ ಅವರೂ ಮಾಡುತ್ತಾರೆ, ಅದನ್ನೇ ಬಡಿಸುತ್ತಾರೆ. ಅವರ ಮೈಯಲ್ಲೂ ಕೆಂಪು ರಕ್ತವೇ ಹರಿಯುತ್ತಿದೆ. ಇವರು ಜಾತ್ರೆಯಲ್ಲಿ ಒಂದು ದಿನ ತೇರು ಎಳೆದು ನಾವೇ ಎಳೆದೆವು, ನಾವೇ ಎಳೆದೆವು ಎಂದು ಹೇಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತರನ್ನು ಅಸ್ಪೃಶ್ಯತೆಯಲ್ಲಿ ಇಟ್ಟವರೇ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರು. ಮನುಸ್ಮೃತಿ, ಬಿಜೆಪಿಯ ದಲಿತ ವಿರೋಧಿ ನೀತಿಯಿಂದಾಗಿ ಅವರು ಇಂದಿಗೂ ಬವಣೆ ಪಡುವಂತಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


