ರಾಜಕೀಯ

ಬಹಮನಿ ಉತ್ಸವಕ್ಕೆ ಬಿಜೆಪಿ ವಿರೋಧ: ಮಲ್ಲಿಕಾರ್ಜುನ್ ಖರ್ಗೆ ಖಂಡನೆ

ಬಹಮನಿ ಉತ್ಸವ ಆಯೋಜಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಸಮರ್ಥಿಸಿಕೊಂಡಿದ್ದು...

ಬಹಮನಿ ಉತ್ಸವಕ್ಕೆ ಬಿಜೆಪಿ ವಿರೋಧ: ಮಲ್ಲಿಕಾರ್ಜುನ್ ಖರ್ಗೆ ಖಂಡನೆ
ಮಲ್ಲಿಕಾರ್ಜುನ್ ಖರ್ಗೆ
Published On :
ಕಲಬುರ್ಗಿ: ಬಹಮನಿ ಉತ್ಸವ ಆಯೋಜಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಸಮರ್ಥಿಸಿಕೊಂಡಿದ್ದು, ಬಹಮನಿ ಸಾಮ್ರಾಜ್ಯದ ಕಲೆ, ಸಾಹಿತ್ಯ, ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಬಹಮನಿ ಉತ್ಸವ ಮಾಡಲಾಗುತ್ತಿದೆ ಎಂದು ಗುರುವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ನಾವು ಯಾರನ್ನೂ ಓಲೈಸುವ ಉದ್ದೇಶದಿಂದ ಬಹಮನಿ ಉತ್ಸವ ಮಾಡುತ್ತಿಲ್ಲ. ಮುಸ್ಲಿಂ ಅರಸರ ವಿರುದ್ಧ ಯುದ್ಧ ಗೆದ್ದು ಅಲ್ಲಾವುದ್ದೀನ್ ಹಸನ್ ಗಂಗೂ ಬಹಮನಿ ಶಾ ಸಾಮ್ರಾಜ್ಯ ಸ್ಥಾಪನೆ ಮಾಡಿದ್ದ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ಸೇರಿಕೊಂಡು ಬಹಮನಿ ಉತ್ಸವ ಆಯೋಜಿಸಿದ್ದು, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವ ಉದ್ದೇಶ ಇದರ ಹಿಂದಿದೆ. ಇದಕ್ಕೆ ಬಿಜೆಪಿ ವಿರೋಧ ಮಾಡುವುದು ಸರಿಯಲ್ಲ ಎಂದರು.
ರಾಷ್ಟ್ರಕೂಟರ ಉತ್ಸವವನ್ನೂ ಸರ್ಕಾರ ಆಯೋಜಿಸಿದೆ. ಇದದಿಂದ ಜೈನರನ್ನು ಮತ್ತು ಹಿಂದೂಗಳನ್ನು ಓಲೈಸುತ್ತಿದ್ದೇವಾ ಎಂದು ಖರ್ಗೆ ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.